ಆಳಂದ: ತಾಲೂಕಿನ ಗಡಿಗ್ರಾಮ ಜಮಗಾ(ಕೆ)ನಲ್ಲಿ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಖಜೂರಿ ಜಿಲ್ಲಾ ಪಂಚಾಯತ ಸದಸ್ಯ ಹರ್ಷಾನಂದ ಗುತ್ತೇದಾರ ಚಾಲನೆ ನೀಡಿದರು.
ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ೪೫ ಲಕ್ಷ ರೂ.ಗಳ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿ, ತಮ್ಮ ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ ಕ್ಷೇತ್ರದ ಎಲ್ಲ ಹಳ್ಳಿಗಳಿಗೂ ಅನುಕೂಲವಾಗುವಂತೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದ್ದೆನೆ ಎಂದರು.
ತಂದೆಯವರು ಶಾಸಕರಾದ ಮೇಲೆ ೨ ವರ್ಷಗಳಲ್ಲಿ ಖಜೂರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಅತಿ ಹೆಚ್ಚು ಅನುದಾನ ತರುವಲ್ಲಿ ಶ್ರಮಿಸಿದ್ದೇನೆ. ಕ್ಷೇತ್ರದ ಪ್ರತಿ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ, ಗ್ರಾಮೀಣ ಸಂಪರ್ಕ ರಸ್ತೆ ಸುಧಾರಣೆಗೆ ಒತ್ತು ನೀಡಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಾಬು ಮೂಲಗೆ, ಮಹೇಶ ಗೌಳಿ, ಬಾಳು ಸೂರ್ಯವಂಶಿ, ಯಲ್ಲಾಲಿಂಗ ಮೂಲಗೆ. ಅಧಿಕಾರಿ ಅರುಣ ಬಿರಾದಾರ ಸೇರಿದಂತೆ ಗ್ರಾಮಸ್ಥರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…