ವಾಡಿ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪೌರತ್ವ ಕಾಯ್ದೆ (ಸಿಎಎ) ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನಾ ಸಮಾವೇಶದಲ್ಲಿ ವಿದ್ಯಾರ್ಥಿನಿಯೊಬ್ಬಳು ಪಾಕ್ ಪರ ಘೋಷಣೆ ಕೂಗಿದ ಘಟನೆಯನ್ನು ಆಲ್ ಇಂಡಿಯಾ ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಖಂಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಐಡಿಎಸ್‌ಒ ನಗರ ಸಮಿತಿ ಅಧ್ಯಕ್ಷ ಗೌತಮ ಪರತೂರಕರ, ವಿದ್ಯಾರ್ಥಿನಿಯ ಈ ಹೇಳಿಕೆ ಅತ್ಯಂತ ಬೇಜವಾಬ್ದಾರಿತನದಿಂದ ಕೂಡಿದೆ. ಇಂಥಹ ಸೂಕ್ಮ ಪರಸ್ಥಿತಿಯಲ್ಲಿ ಅಧಿಕಪ್ರಸಂಗತನ ತೋರಿಸಿದ್ದು ಸರಿಯಲ್ಲ. ಇದೇ ಘಟನೆಯನ್ನು ಮುಂದಿಟ್ಟುಕೊಂಡು ಪಟ್ಟಭದ್ರ ಹಿತಾಸಕ್ತಿಗಳು ಹೋರಾಟಕ್ಕೆ ಮಸಿ ಬಳಿಯುವ ಕಾರ್ಯಕ್ಕೆ ಬಳಸಿಕೊಳ್ಳಬಾರದು.
ಅಂತಹ ಪ್ರಯತ್ನಗಳ ವಿರುದ್ಧ ಸಹಹೃದಯಿಗಳು ಒಗ್ಗಟ್ಟಾಗಿ ನಿಲ್ಲಬೇಕು. ದೇಶದ ಜನತೆ ಮತ್ತು ವಿದ್ಯಾರ್ಥಿಗಳು ಪ್ರಜಾತಾಂತ್ರಿಕ ಹಾಗೂ ಜನೈಕ್ಯ ಹೋರಾಟಗಳ ವಾತಾವರಣವನ್ನು ರಕ್ಷಿಸಬೇಕು ಎಂದು ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…