ಯಾದಗಿರಿ: ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಯುವಕ ಓರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಬೊರಬಂಡಾ ಗ್ರಾಮದ ನಿವಾಸಿ ಮೋಹನ ಬಾಲ್ಯ ನಾಯಕ ಪವಾರ್ (26) ಕೊಲೆಯಾದ ಯುವಕ. ಮೋಹನ ದ್ವೀತಿಯ ಪಿಯುಸಿ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ, ಇಂದು ಮಧ್ಯಾಹ್ನ ಪಟ್ಟಣದ ಶಿವಂ ಖಾನವಾಳಿ ಪಕ್ಕದಲ್ಲೇ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಗುರುಮಠಕಲ್ ನಿವಾಸಿಯಾಗಿರುವ ಮಹಿಪಾಲ್ ಭೀಮಶಪ್ಪ (22) ಹಾಗೂ ತೈಯಮುರ್ ಕೊಲೆ ಮಾಡಿರುವ ಆರೋಪಿಗಳು ಎಂದು ತಿಳಿದುಬಂದಿದ್ದು, ವೈಯಕ್ತಿಕ ಕಾರಣ ಹಿನ್ನೆಲೆಯಲ್ಲಿ ಮೋಹನನ್ನು ಚಾಕುವಿನಿಂದ ತಿವಿದಿದ್ದು ಕೊಲೆ ಮಾಡಿದ್ದಾರೆ ಎಂದು ಅನುಮಾನ ವ್ಯಕ್ತವಾಗುತ್ತಿದೆ. ಕೊಲೆಗೆ ಇದುವರೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಇಬ್ಬರು ಆರೋಪಿಗಳು ಕೊಲೆ ಮಾಡಿ ಪರಾರಿಯಾಗಿದ್ದು, ಆರೋಪಿಗಳ ಬಂಧನಕ್ಕೆ ಗುರುಮಠಕಲ್ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದಾರೆ.
ಘಟನಾ ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತಿದ್ದಾರೆ.