ಕಲಬುರಗಿ: ಉದನೂರಿನ ಅಪ್ಪಾಜಿ ಶಿಕ್ಷಣ ಟ್ರಸ್ಟ್ ವತಿಯಿಂದ ಫೆ. ೨೫ ರಂದು ಬೆಳಗ್ಗೆ ೧೦: ೩೦ ಗಂಟೆಗೆ ಇಲ್ಲಿನ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಅಪ್ಪಾಜಿ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ೧೧ನೇ ಮಕ್ಕಳ ಸಾಂಸ್ಕೃತಿಕ ಉತ್ಸವ-೨೦೨೦ ಹಮ್ಮಿಕೊಳ್ಳಲಾಗಿದೆ ಎಂದು ಅಪ್ಪಾಜಿ ಶಿಕ್ಷಣ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷೆ ಭಾಗಮ್ಮ ರಾಜು ಬಿರಾದಾರ್ ತಿಳಿಸಿದ್ದಾರೆ.
ಜಿಡಗಾ, ಮುಗಳಕೋಡ, ಉದನೂರ ಪೂಜ್ಯರಾದ ಡಾ. ಮುರುಘರಾಜೇಂದ್ರ ಸ್ವಾಮೀಜಿ ಹಾಗೂ ಸಿದ್ದರಾಮೇಶ್ವರ ಸ್ವಾಮೀಜಿ ಕೃಪಾಶೀರ್ವಾದದಿಂದ ಅಪ್ಪಾಜಿ ಶಿಕ್ಷಣ ಟ್ರಸ್ಟ್‌ನಿಂದ ಆಮಂತ್ರಿತ ಶ್ರೀಗಳಿಗೆ ವಿಶೇಷ ಗೌರವ ಸತ್ಕಾರ, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಡಗಂಚಿಯ ಶಾಂತಲಿಂಗೇಶ್ವರ ಸಂಸ್ಥಾನ ಕಟ್ಟಿಮಠದ ಪೂಜ್ಯ ವೀರತಪಸ್ವಿ ವೀರಭದ್ರ ಶಿವಾಚಾರ್ಯರು ಸಾನಿಧ್ಯವಹಿಸಿದರೆ, ಶ್ರೀನಿವಾಸ ಸರಡಗಿಯ ಚಿಕ್ಕವೀರೇಶ್ವರ ಸಂಸ್ಥಾನ ಹಿರೇಮಠದ ಪೂಜ್ಯ ಡಾ. ರೇವಣಸಿದ್ದ ಶಿವಾಚಾರ್ಯರು, ಬಡದಾಳ ತೇರಿನಮಠದ ಪೂಜ್ಯ ಚನ್ನಮಲ್ಲ ಶಿವಾಚಾರ್ಯರರು, ಲಿಂಗಸೂಗುರು, ಯರಡೋಣ ಷಡಕ್ಷರಿ ಸಿದ್ದರಾಮೇಶ್ವರ ಪುಣ್ಯಾಶ್ರಮದ ಪೂಜ್ಯ ಮುರುಘೇಂದ್ರ ಶಿವಯೋಗಿಗಳು ಸಮ್ಮುಖವಹಿಸುವರು.
ವಿಧಾನಪರಿಷತ್ ಸದಸ್ಯ ಬಿ.ಜಿ. ಪಾಟೀಲ್ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಪ್ರಚಾರ ಪತ್ರಿಕೆ ಬಿಡುಗಡೆಗೊಳಿಸುವರು.
ಖ್ಯಾತ ಉದ್ದಿಮೆದಾರ ರಾಜು(ಶ್ರೀಮಂತ)ನವಲದಿ ವಿಜೇತರಿಗೆ ಪ್ರಮಾಣ ಪತ್ರ ವಿತರಿಸುವರು. ಲೆಕ್ಕಪರಿಶೋಧಕ ಶರಣಬಸಪ್ಪ ಕಾಬಾ ಮುಖ್ಯ ಅತಿಥಿಗಳಾಗಿ ಆಗಮಿಸುವರು. ದಕ್ಷಿಣ ವಲಯ ಬಿಇಓ ವೀರಣ್ಣ ಬೊಮ್ಮನಳ್ಳಿ ಅಧ್ಯಕ್ಷತೆವಹಿಸುವರು. ಇದೇ ವೇಳೆಗೆ ಹಾಸ್ಯ ಚಕ್ರವರ್ತಿ ಗುಂಡಣ್ಣ ಡಿಗ್ಗಿ ಅವರಿಂದ ಹಾಸ್ಯ ಕಾರ್ಯಕ್ರಮ ನಡೆದುಬರಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲಕರು, ಸಾಂಸ್ಕೃತಿ, ಕಲಾರಾಧಕರು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು ಎಂದು ಅವರು ಕೋರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…