ಶಹಾಪುರ: ವಿದ್ಯಾರ್ಥಿಗಳಲ್ಲಿ ಯುವಕರಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ಈ ಸಂದರ್ಭದಲ್ಲಿ ಪ್ರೀತಿ ಸಹಕಾರ ಸಹಬಾಳ್ವೆ ಪರೋಪಕಾರ ಮುಂತಾದ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ಮಾದರಿ ಯುವಕರು ಆಗಬೇಕೆಂದು ಕಲ್ಮಠ ಪದವಿಪೂರ್ವ ಕಾಲೇಜು ಮಾನವಿ ಉಪನ್ಯಾಸಕರಾದ ರಮೇಶಬಾಬು ಯಾಳಗಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಭೀಮರಾಯನಗುಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ನಿರಂತರ ಪರಿಶ್ರಮ ಯಶಸ್ಸಿಗೆ ಕಾರಣವಾಗುತ್ತದೆ. ತಾವು ಪರಿಶ್ರಮಿಗಳು ಆದಾಗ ಮಾತ್ರ ಗುರಿಮುಟ್ಟಲು ಸಾಧ್ಯವಾಗುತ್ತದೆ. ಈ ದೇಶ ಕಟ್ಟಿದ ಮಹಾಪುರುಷರ ಇತಿಹಾಸವನ್ನು ನಾವು ಅರಿತುಕೊಳ್ಳಬೇಕಾಗಿದೆ. ಎಂದು ಕಿವಿಮಾತು ಹೇಳಿದರು.
ಭೀಮರಾಯನಗುಡಿ ಕಾಲೇಜಿನ ವಿದ್ಯಾರ್ಥಿಗಳು ಅನಾಥಾಶ್ರಮಕ್ಕೆ ದೇಣಿಗೆ ನೀಡಿ ಮಾದರಿಯಾಗಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀಶೈಲ ಚೆನ್ನಮಲ್ಲಿಕಾರ್ಜುನ ಅನಾಥಾಶ್ರಮದ ಅಮ್ಮನವರು, ಪಂಪಾಪತಿ ಶಿರ್ಣ, ಎಂ.ಎಂ ಹುಂಡೇಕಾರ ಉಪನ್ಯಾಸಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿಣಜಗಿ ಗುರುಲಿಂಗಪ್ಪ ವಹಿಸಿದ್ದರು. ಸೋಮಶೇಖರ್ ಜಾಗಟೆ ಸ್ವಾಗತಿಸಿದರೆ ಸಾಂಸ್ಕೃತಿಕ ಕಾರ್ಯದರ್ಶಿ ಡಾ. ರವೀಂದ್ರನಾಥ್ ಹೊಸಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವೇಂದ್ರಪ್ಪ ಮಡಿವಾಳಕರ್ ನಿರೂಪಿಸಿದರು. ಶಿವರಾಜ ಬೀರನೂರ ವಂದಿಸಿದರು.
ಇದೇ ಸಂದರ್ಭದಲ್ಲಿ ಪಿಯುಸಿ ವಿದ್ಯಾರ್ಥಿಗಳಿಂದ ಸಂಗ್ರಹಿಸಲಾದ ದೇಣಿಗೆ ಹಣದಿಂದ ಒಂದು ಕ್ವಿಂಟಾಲ್ ಅಕ್ಕಿಯನ್ನು ಹಾಗೂ ನಗದು ಹಣವನ್ನು ಅನಾಥಾಶ್ರಮದ ಮುಖ್ಯಸ್ಥರಿಗೆ ಹಸ್ತಾಂತರಿಸಲಾಯಿತು. ಉಪನ್ಯಾಸಕರಾದ ಶ್ರೀಮತಿ ವರ್ಷಾ, ಸುರೇಶ್ ಬಾಬು ಅರುಣಿ, ಭೀಮಣ್ಣ ಅಂಚೆಸೂಗೂರು, ಅಶ್ವಿನಿ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…