ಬಿಸಿ ಬಿಸಿ ಸುದ್ದಿ

ಅಪ್ಪುಗೌಡರ ಜನ್ಮದಿನದ ನಿಮಿತ್ತ: ಬೃಹತ್ ಉದ್ಯೋಗ ಮೇಳದ ಪ್ರಚಾರಾಂದೋಲನಕ್ಕೆ ಚಾಲನೆ

ಕಲಬುರಗಿ: ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರ ಜನ್ಮದಿನದಂಗವಾಗಿ ಶ್ರೀ ಚಂದ್ರಶೇಖರ ಪಾಟೀಲ ರೇವೂರ ಅಭಿಮಾನಿಗಳ ಬಳಗದ ವತಿಯಿಂದ ಫೆ.೨೮ ರಂದು ಬೆಳಗ್ಗೆ ೧೦.೩೦ ಕ್ಕೆ ನಗರದ ಎನ್.ವಿ.ಮೈದಾನದಲ್ಲಿ ಆಯೋಜಿಸಲಾಗಿರುವ ಬೃಹತ್ ಉದ್ಯೋಗ ಮೇಳದ ಕುರಿತು ಇಲ್ಲಿನ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ನೇತೃತ್ವದಲ್ಲಿ ನಗರದ ವಿವಿಧ ಕಾಲೇಜುಗಳಿಗೆ ತೆರಳಿ ಪ್ರಚಾರಾಂದೋಲನ ನಡೆಸಲಾಯಿತು.

ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಉದ್ಯೋಗದ ಸಮಸ್ಯೆ ಯುವಕರನ್ನು ಕಾಡುತ್ತಿದೆ. ಸಾಲ ಮಾಡಿ ಹೆತ್ತವರು ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸವನ್ನು ನೀಡಿದರೂ ವಿದ್ಯಾವಂತ ಯುವಕರು ಉದ್ಯೋಗವಿಲ್ಲದೇ ತಮ್ಮ ಭವಿಷ್ಯದ ಚಿಂತೆಯಲ್ಲಿಯೇ ದಿನ ದೂಡುವಂತಹ ಸ್ಥಿತಿಯಿದೆ. ಈ ಸಮಸ್ಯೆಗಳನ್ನು ಮನಗಂಡು ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಅಳಿಲು ಸೇವೆ ಎನ್ನುವ ಹಾಗೇ ಈ ಬೃಹತ್ ಉದ್ಯೋಗ ಮೇಳವನ್ನು ರೂಪಿಸಿದ್ದಾರೆ. ಈ ಉದ್ಯೋಗ ಮೇಳದ ಸದುಪಯೋಗವನ್ನು ಈ ಭಾಗದ ಯುವಕರು ಪಡೆದುಕೊಂಡು ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.

ಪ್ರಾಧ್ಯಾಪಕ ಡಾ.ಬಾಬುರಾವ ಶೇರಿಕಾರ ಹಾಗೂ ಸಾಹಿತ್ಯ ಪ್ರೇಮಿ ರವೀಂದ್ರಕುಮಾರ ಭಂಟನಳ್ಳಿ ಮಾತನಾಡಿ, ಯುವಕ, ಯುವತಿಯರು ಸರ್ಕಾರಿ ಕೆಲಸವನ್ನೇ ಅವಲಂಬನೆ ಮಾಡಿ ಕುಳಿತುಕೊಳ್ಳಬಾರದು. ಖಾಸಗಿ ಕ್ಷೇತ್ರದಲ್ಲೂ ಈಗ ಉದ್ಯೋಗ ಮಾರುಕಟ್ಟೆ ಬೃಹತಾಗಿ ಬೆಳೆದಿದೆ. ಶಿಕ್ಷಣ ಮುಗಿಸಿದ ನಂತರ ವಿದ್ಯಾರ್ಥಿಗಳು ಏನು ಮಾಡಬೇಕು ಎಂಬ ಗೊಂದಲದಲ್ಲಿರುತ್ತಾರೆ. ಜತೆಗೆ ಉದ್ಯೋಗ ಹುಡುಕುವುದರಲ್ಲಿ ತಲ್ಲೀನರಾಗಿರುತ್ತಾರೆ. ಅಂಥವರಿಗೆ ಈ ಉದ್ಯೋಗ ಮೇಳ ನೆರವಾಗಲಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಪ್ರಮುಖರಾದ ಶರಣರಾಜ್ ಛಪ್ಪರಬಂದಿ, ಪ್ರಭುಲಿಂಗ ಮೂಲಗೆ, ಶಿವಾನಂದ ಮಠಪತಿ, ಶಿವಶರಣಪ್ಪ ಕುಸನೂರ, ಪ್ರಭುದೇವ ಯಳವಂತಗಿ, ಅಣ್ಣಾರಾವ ಧುತ್ತರಗಾಂವ, ಪರಮೇಶ್ವರ ಶಟಕಾರ, ಸಂಗಮೇಶ ಶಾಸ್ತ್ರಿ ಮಾಶಾಳ, ರವಿಕುಮಾರ ಶಹಾಪುರಕರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ ಸೇರಿದಂತೆ ಅನೇಕ ಗಣ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

10 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

20 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

20 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

20 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago