ಬಿಸಿ ಬಿಸಿ ಸುದ್ದಿ

ಸಿ.ಸಿ ರಸ್ತೆ ಚರಂಡಿ ಕಾಮಗಾರಿಗಳಿಗೆ ಶಾಸಕ ನರಸಿಂಹ ನಾಯಕ ಚಾಲನೆ

ಸುರಪುರ: ತಾಲೂಕಿನ ಅನೇಕ ಗ್ರಾಮಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಇಮದು ಚಾಲನೆ ನೀಡುತ್ತಿದ್ದು,ಮುಂಬರುವ ಕೆಲವು ತಿಂಗಳುಗಳಲ್ಲಿ ಸಿಸಿ ರಸ್ತೆ ನಿರ್ಮಾಣಗೊಳ್ಳಲಿವೆ ಎಂದರು.ಅಲ್ಲದೆ ಕಾಮಗಾರಿಗಳನ್ನು ನಿರ್ಮಿಸುತ್ತಿರುವ ಸಂಸ್ಥೆಯವರು ಒಳ್ಳೆ ಗುಣಮಟ್ಟದ ಕಾಮಗಾರಿ ನಿರ್ಮಿಸಬೇಕು,ಒಂದು ವೇಳೆ ಉತ್ತಮ ಗುಣಮಟ್ಟವಿಲ್ಲದಿದ್ದಲ್ಲಿ ಅಂತಹ ಕಾಮಗಾರಿ ನಿರ್ಮಿಸಿದ ಸಂಸ್ಥೆ ಮತ್ತು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಅಧಿಕಾರಿಗಳಿಗೆ ಎಚ್ಚರಿಸಿದರು.

ತಾಲೂಕಿನ ಖಾನಾಪುರ ಎಸ್.ಹೆಚ್.ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಬಿಜಾಸಪುರ ಗ್ರಾಮದಲ್ಲಿ ಸುಮಾರು ೨೧.೯೭ ಲಕ್ಷ ರೂಪಾಯಿಗಳು ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ಮಾತನಾಡಿ,ಉತ್ತಮವಾದ ಕಾಮಗಾರಿಗಳ ನಿರ್ಮಿಸಿ ಇದರಿಂದ ಹತ್ತಾರು ವರ್ಷಗಳು ಕಾಂಗಾರಿ ಬಾಳಿದರೆ ಜನತೆ ನಿಮ್ಮನ್ನು ಸ್ಮರಿಸಲಿದ್ದಾರೆ ಎಂದರು.

ನಂತರ ರುಕ್ಮಾಪುರ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಿದರು ಹಾಗು ಚೌಡೇಶ್ವರಿಹಾಳ ಗ್ರಾಮದಲ್ಲಿ ೧೫ ಲಕ್ಷ ವೆಚ್ಚದ ಸಿಸಿ ರಸ್ತೆ ಹಾಗು ಚರಂಡಿ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿದರು. ನಂತರ ಸೂಗುರು ಗ್ರಾಮದಲ್ಲಿ ೨೬.೩೭ ಲಕ್ಷ ರೂಪಾಯಿಗಳ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬೇವಿನಾಳ ಗ್ರಾಮದಲ್ಲಿ ೨೧.೪೩ ಲಕ್ಷ ರೂಪಾಯಿಗಳ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ನಂತರ ಚಂದ್ಲಾಪುರ ಗ್ರಾಮದಲ್ಲಿ ೧೫ ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಹಾಗು ಚರಂಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ನಂತರ ಎರಡು ಶಾಲಾ ಕೋಣೆಗಳನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಾ ಹನಮಪ್ಪ ನಾಯಕ (ತಾತಾ),ಜಿ.ಪಂ ಸದಸ್ಯ ಮರಿಲಿಂಗಪ್ಪ ಕರ್ನಾಳ,ವಿಜಯಕುಮಾರ ಮಂಗ್ಯಾಳ,ಸಣ್ಣ ದೇಸಾಯಿ ದೇವರಗೋನಾಲ,ದೇವರಾಜ ಮಕಾಶಿ,ಭೀಮಣ್ಣ ಬೇವಿನಾಳ,ದೋಡ್ಡ ದೇಸಾಯಿ, ವಿರುಪಾಕ್ಷಿ ಕರ್ನಾಳ,ದುರ್ಗಪ್ಪ ಗೋಗಿಕೇರಾ,ಜಗದೀಶ ಪಾಟೀಲ,ಮಲ್ಲು ಹೂಗಾರ,ನಿಂಗಣ್ಣ ನಾಯಕ ಸೇರಿದಂತೆ ಅನೇಕರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago