ಕಲಬುರಗಿ: ಇಲ್ಲಿನ ಎನ್ಈಕೆಎಸ್ಆರ್‌ಟಿಸಿ ಇಲಾಖೆಯ ಡಿಪೋ ನಂಬರ್ 1ರ ಎಫ್‌ಡಿಎ ಅಧಿಕಾರಿ, ಮತ್ತು ಅಟೆಂಡರ್ ಬಸ್ ಕಂಡಕ್ಟರ್ನಿಂದ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಎಸಿಬಿ ಡಿವೈಎಸ್ಪಿ ಸುಧಾ ಆದಿ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಎನ್ಈಕೆಎಸ್ಆರ್‌ಟಿಸಿ ಇಲಾಖೆಯ ಎಫ್‌ಡಿಎ ಅಧಿಕಾರಿ ಅಖಿಲ್ ಮತ್ತು ಅಟೆಂಡರ್ ಮುನ್ನಾಭಾಯಿ 25 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ದಾಳಕ್ಕೆ ಸಿಕ್ಕಿಬಿದಿದ್ದಾರೆ.
ಚಿಂಚೋಳಿ ಬಸ್ ಡಿಪೋದ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವಿದ್ಯಾಧರ, ಕುಟುಂಬದ ಆರೋಗ್ಯ ಸಮಸ್ಯೆ ನಿಮಿತ್ತ 13 ತಿಂಗಳು ರಜೆ ಹಾಕಿದ್ದು, ಈ ರಜೆಯ ಪ್ರಕರಣ ರದ್ದಿಗೆ ಹಾಗೂ ಸಂಬಳ ಸೆಟ್ಲಮೆಂಟ್ ಮಾಡಿರುವ ಹಿನ್ನೆಲೆ ಬಲೆಗೆ ಬಿದ್ದ ಅಧಿಕಾರಿ ಸುಮಾರು 50 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ.
ಡೀಲ್ ಗೆ ಸಂಭದಿಸಿದಂತೆ ಕಚೇರಿಯಲ್ಲಿ ವಿದ್ಯಾಧರ ಅವರಿಂದ 25 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಡಿವೈಎಸ್ಪಿ ಸುಧಾ ಆದಿ ಅವರ ನೇತೃತ್ವದಲ್ಲಿ ದಾಳಿ ಮಾಡಿ ಲಂಚಕೋರ ಸಿಬ್ಬಂದಿಗಳ ಮೇಲೆ ಧಾಳಿ ನಡೆಸಿ ಪರಿಶೀಲಿಸಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…