ಓವೈಸಿ ಪಕ್ಷದ ಮಾಜಿ ಶಾಸಕ ಪಠಾಣ್ ಬಂಧನಕ್ಕೆ ಬಿರಾದಾರ್ ಆಗ್ರಹ

0
79

ಕಲಬುರಗಿ: ಪೌರತ್ವ ಕಾಯ್ದೆ ವಿರೋಧಿಸಿ ನಗರದಲ್ಲಿ ಇತ್ತೀಚೆಗೆ ಜರುಗಿದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಪ್ರಚೋಧನಾಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಮಜಲಿಸ್ -ಇ -ಇತೆಹಾದುಲ್ ಮುಸ್ಲಿಮೀನ್ ಪಕ್ಷದ ಮಾಜಿ ಶಾಸಕ ಹಾಗೂ ವಕ್ತಾರ ವಾರಿಸ್ ಯೂಸೂಪ್ ಪಠಾಣ್ ವಿರುದ್ಧ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೂಡಲೇ ಆತನಿಗೆ ಬಂಧಿಸಿ ಕಾನೂನಿನ ಶಿಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುಭಾಷ್ ಬಿರಾದಾರ್ ಕಮಲಾಪೂರ್ ಅವರು ಒತ್ತಾಯಿಸಿದ್ದಾರೆ.

ನಗರದ ಹಾಗರಗಾ ಕ್ರಾಸ್ ಬಳಿಯ ಪೀರ್ ಬಂಗಾಲಿ ಮೈದಾನದಲ್ಲಿ ಫೆ.೧೫ರಂದು ರಾತ್ರಿ ಜರುಗಿದ ತಿದ್ದುಪಡಿ ಪೌರತ್ವ ಕಾಯ್ದೆ ಕೈಬಿಡಬೇಕು, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರೋಧಿಸಿ ಎಐಎಂಎಂ ಪಕ್ಷದಿಂದ ಆಯೋಜಿಸಿದ್ದ ವಿಭಾಗ ಪ್ರತಿಭಟನಾ ರ‍್ಯಾಲಿಯಲ್ಲಿ ಈಗ ಕೇವಲ ನಮ್ಮ ಹೆಣ್ಣು ಮಕ್ಕಳು (ಸಿಂಹಿಣಿಯರು) ಬೀದಿಗಿಳಿದಿದ್ದಕ್ಕೆ ಎಲ್ಲರು ಬೆವರು ಬಿಟ್ಟಿದ್ದಾರೆ. ಇನ್ನೂ ೧೫ ಕೋಟಿ ನಾವು ಅವರೊಂದಿಗೆ ಸಾಥ್ ನೀಡಿದರೆ ೧೦೦ ಕೋಟಿಗೆ ಸಮಾನವಾಗುತ್ತೇವೆ ಎನ್ನುವ ಮೂಲಕ ಪರೋಕ್ಷವಾಗಿ ಹಿಂದುಗಳಿಗೆ ಬೆದರಿಕೆ ಹಾಕಿದ್ದು ಅತ್ಯಂತ ಖಂಡನೀಯವಾಗಿದೆ. ತಪ್ಪು ಮಾಡಿದ ಮೇಲೆ ಬೇರೆ ಸ್ಥಳದಲ್ಲಿ ಕ್ಷಮೆ ಕೇಳಿದ್ದು ಸರಿಯಲ್ಲ. ಕೂಡಲೇ ಬಹುಸಂಖ್ಯಾತ ಹಿಂದೂಗಳಿಗೆ ಬೆದರಿಕೆ ಹಾಕಿದ ಪಠಾಣ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಅವರು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

Contact Your\'s Advertisement; 9902492681

ನಗರದಲ್ಲಿ ಪೋಲಿಸ್ ಆಯುಕ್ತರಿದ್ದಾರೆ. ಈಶಾನ್ಯ ವಲಯ ಪೋಲಿಸ್ ಮಹಾನಿರೀಕ್ಷಕರೂ ಸಹ ಇದ್ದಾರೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಸಹ ಕಾರ್ಯನಿರ್ವಹಿಸುತ್ತಿದ್ದಾರೆ. ಆದಾಗ್ಯೂ, ಕಾನೂನು ಕೈಗೆ ತೆಗೆದುಕೊಳ್ಳುವ ಹಾಗೂ ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಇಲ್ಲಿಯವರೆಗೂ ಕಾನೂನು ಕ್ರಮ ಕೈಗೊಳ್ಳದೇ ಇರುವುದರಿಂದ ಪೌರತ್ವ ವಿರೋಧಿ ಹೋರಾಟಗಳಿಗೆ ಮತ್ತಷ್ಟು ಕುಮ್ಮಕ್ಕು ಕೊಟ್ಟಂತಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಪೌರತ್ವ ಕಾಯ್ದೆಯು ಸಮಗ್ರ ಭಾರತೀಯರ ಪರವಾಗಿದ್ದು, ಕಾಂಗ್ರೆಸ್ ಪಕ್ಷವು ಅಪಪ್ರಚಾರ ಮಾಡಿ ಅಲ್ಪಸಂಖ್ಯಾತರ ಸಮುದಾಯದ ಮುಖಂಡರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅಲ್ಪಸಂಖ್ಯಾತರು ಈ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here