ಸುರಪುರ: ನಗರದ ಬ್ರಹ್ಮಕುಮಾರಿಸ್ ಕೇಂದ್ರದಲ್ಲಿ ನಾಳೆ ಗುರುವಾರ ಸಂಜೆ ಆರು ಗಂಟೆಗೆ ಮಹಾಶಿವರಾತ್ರಿ ಅಂಗವಾಗಿ ತ್ರಿಮೂರ್ತಿ ಶಿವ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬ್ರಹ್ಮಕುಮಾರಿಸ್‌ನ ಕಲಬುರ್ಗಿ ಉಪ ವಲಯದ ಮುಖ್ಯಸ್ಥರಾದ ರಾಜಯೋಗಿನಿ ಬಿ.ಕೆ.ವಿಜಯಾ ದೀದಿ ಭಾಗವಹಿಸಲಿದ್ದು,ಶಿವರಾತ್ರಿಯ ಮಹತ್ವವನ್ನು ಕುರಿತು ರಾಜಯೋಗಿ ಪ್ರೇಮಣ್ಣ ಪ್ರವಚನ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ವಿವಿಧ ರಂಗದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು,ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಲಕ್ಷ್ಮಣ ಬಿ.ಗುತ್ತೇದಾರ, ಯಾದಗಿರಿ ಜಿಲ್ಲಾ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ ಜಿಲ್ಲಾಧ್ಯಕ್ಷರಾ ಡಿ.ಸಿ.ಪಾಟೀಲ ಕೆಂಭಾವಿ,ತೋಟಗಾರಿಕೆ ಇಲಾಖೆಯ ಹಿರಿಯ ನಿರ್ದೇಶಕರಾದ ಸಂತೋಷ,ನಗರಸಭೆ ಸದಸ್ಯರಾದ ಶ್ರೀಮತಿ ಸುಜಾತಾ ವಿ.ಜೇವರ್ಗಿ ಹಾಗು ನಗರಸಭೆಯ ಕಿರಿಯ ಅಭಿಯಂತರ ಸುನೀಲ್ ನಾಯಕ ಇವರುಗಳಿಗೆ ಸನ್ಮಾನ ನಡೆಯಲಿದೆ ಮತ್ತು ಶ್ರೀ ಖಾಸ್ಗತೇಶ್ವರ ಸಾಂಸ್ಕೃತಿಕ ನೃತ್ಯ ಕಲಾ ಸಂಸ್ಥೆ ಸುರಪುರ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ಸುರಪುರ ಬ್ರಹ್ಮಕುಮಾರಿಸ್ ದೈವಿ ಪರಿವಾರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…