ಬಿಸಿ ಬಿಸಿ ಸುದ್ದಿ

ಬಸ್ ದರ ಏರಿಸಿ ಬರೆ ಎಳೆದ ಸರಕಾರ

ವಾಡಿ: ಶೇ.೧೨ರಷ್ಟು ಬಸ್ ದರ ಏರಿಕೆ ಮಾಡುವ ಮೂಲಕ ಸರಕಾರ ಪ್ರಯಾಣಿಕರ ಎದೆಗೆ ಮತ್ತೊಂದು ಬರೆ ಎಳೆದಿದೆ. ನಿರಂತರ ಬೆಲೆ ಏರಿಕೆಯಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ) ಕಮ್ಯುನಿಸ್ಟ್ ಪಕ್ಷದ ನಗರ ಸಮಿತಿ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪ ಆರ್.ಕೆ ದೂರಿದ್ದಾರೆ.

ಬಸ್ ಪ್ರಯಾಣ ದರ ಏರಿಕೆ ಮಾಡಿರುವ ಕೆಎಸ್‌ಆರ್‌ಟಿಸಿ ಇಲಾಖೆಯ ಕ್ರಮವನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಜನವಿರೋಧಿ ಸರಕಾರಗಳಿಂದ ಜನರು ಒಳ್ಳೆಯದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಈಗಾಗಲೇ ಹಾಲು, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಇನ್ನಿತರ ಅವಶ್ಯಕ ವಸ್ತುಗಳ ದರ ಏರಿಕೆಗಳಿಂದ ದೇಶದ ಜನಸಾಮಾನ್ಯರು ತೀವ್ರವಾದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಳೆದ ಎರಡು ವರ್ಷಗಳ ಸತತ ಪ್ರವಾಹದಿಂದ ಸಂತ್ರಸ್ಥರಾದ ಜನತೆಯು ಇನ್ನೂ ಚೇತರಿಸಿಕೊಂಡಿಲ್ಲ. ದೇಶದಲ್ಲಿ ಹರಡುತ್ತಿರುವ ಅರ್ಥಿಕ ಬಿಕ್ಕಟ್ಟು ಮತ್ತು ಉದ್ಯೋಗ ನಾಶಗಳು ಜನರ ಆದಾಯವನ್ನು ಕುಂಠಿತಗೊಳಿಸಿವೆ.

ಕೆಎಸ್‌ಆರ್‌ಟಿಸಿಯಂತಹ ಸಾರ್ವಜನಿಕ ಸಾರಿಗೆಯನ್ನು ಬಳಸುವವರು ಬಹುತೇಕ ದುಡಿಯುವ ಬಡಜನಗಳೇ ಆಗಿದ್ದಾರೆ. ಇಂಥಹ ಸಂದರ್ಭದಲ್ಲಿ ಜನರಿಗೆ ನೆರವಾಗಬೇಕಾದ ಒಂದು ಪ್ರಜಾಪ್ರಭುತ್ವದ ಸರಕಾರ, ಗಾಯದ ಮೇಲೆ ಬರೆ ಎಳೆಯುವ ಮೂಲಕ ಜನದ್ರೋಹ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲಾಖೆಯಲ್ಲಿರುವ ಭ್ರಷ್ಟಾಚಾರ ಮತ್ತು ದುಂದುವೆಚ್ಚಗಳನ್ನು ನಿಯಂತ್ರಿಸಿ, ತಕ್ಷಣವೇ ಬಸ್ ದರ ಏರಿಕೆ ತೀರ್ಮಾನ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago