ಬಿಸಿ ಬಿಸಿ ಸುದ್ದಿ

ಬಿಜೆಪಿ ಶಾಸಕನಿಂದ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಅವಹೇಳಕಾರಿ ಹೇಳಿಕೆ ಖಂಡನೆ

ಕಲಬುರಗಿ: ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳರವರು ನಾಡಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್. ಎಸ್. ದೊರೆಸ್ವಾಮಿರವರ ಬಗ್ಗೆ ತುಚ್ಛವಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದು ಮತ್ತು ಅವರನ್ನು ಪಾಕಿಸ್ತಾನದ ಏಜೆಂಟರೆಂದು ಕರೆದಿದಿದ್ದನ್ನು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯು ತೀವ್ರವಾಗಿ ಖಂಡಿಸಿದೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ ಇವತ್ತಿನವರೆಗೂ ತಾವು ನಂಬಿದ ವಿಚಾರ ಮತ್ತು ಆದರ್ಶಗಳಿಗೆ ಅನುಗುಣವಾಗಿ ಜೀವನ ನಡೆಸುತ್ತಾ ಬಂದಿದ್ದು, ಇಂದು ಜನತೆಯ ಜ್ವಲಂತ ಸಮಸ್ಯೆಗಳ ಕುರಿತು ಧ್ವನಿ ಎತ್ತುತ್ತಾ ಬಂದಿದ್ದಾರೆ. ಪಕ್ಷಭೇದ ಮರೆತು ಅಧಿಕಾರಾರೂಢರಾದ ಎಲ್ಲಾ ಪಕ್ಷಗಳನ್ನು ಟೀಕಿಸುತ್ತಾ ಹೋರಾಡುತ್ತಾ ಬಂದಿದ್ದಾರೆ. ಅಧಿಕಾರದ ಹಿಂದೆ ಬೀಳದೆ ಬಡವರ, ದೀನ-ದಲಿತರ, ಮಹಿಳೆಯರ ರೈತ  ಮತ್ತು ವಿದ್ಯಾರ್ಥಿಗಳ ಚಳುವಳಿಗಳನ್ನು ಬೆಂಬಲಿಸುತ್ತಾ, ಪ್ರೋತ್ಸಾಹಿಸುತ್ತಾ ಬಂದಿದ್ದಾರೆ ಎಂದು ಜಿಲ್ಲಾ ಸಮಿತಿಯ ಸಂಚಾಲಕ ಆರ್. ಕೆ. ವೀರಭದ್ರಪ್ಪ ತಿಳಿಸಿದರು.

ಅಲ್ಲದೆ ಈ ಹಿಂದೆ ನಮ್ಮ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಆಧ್ಯಕ್ಷರಾಗಿ ಹಾಗೂ ಪ್ರಸ್ತುತ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಾ ಶೈಕ್ಷಣಿಕ ಚಳುವಳಿಗೆ ತಮ್ಮದೆಯಾದ ಕೊಡುಗೆಯನ್ನು ನೀಡಿದ್ದು, ಇಂಥ ಸಾಮಾಜಿಕ ಬದ್ಧತೆಯನ್ನು ಹೊಂದಿದ ಶತಾಯುಷಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಕುರಿತು ತುಂಬಾ ಅವಹೇಳನಕಾರಿಯಾಗಿ ಮಾತನಾಡಿದ್ದು  ನಾಡಿನ ಜನತೆಗೆ ತೀವ್ರ ಬೇಸರವನ್ನುಂಟು ಮಾಡಿದೆ. ಈ ಘಟನೆಯನ್ನು ರಾಜ್ಯದ  ಶಿಕ್ಷಣಪ್ರೇಮಿ ಮತ್ತು ಎಲ್ಲಾ ಜನರು ಖಂಡಿಸಿ ಶಾಸಕನ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago