ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿರುವ ಘಟನೆ ಇಲ್ಲಿನ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಕೃತ್ಯ ಖಂಡಿಸಿ ಗ್ರಾಮಸ್ಥರು ಮತ್ತು ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಮಂಗಳವಾರ ಬೆಳಿಗ್ಗೆ ರಾತ್ರಿ ಕಿಡಿಗೇಡಿಗಳು ಅಂಬೇಡ್ಕರ್ ಪುತ್ಥಳಿಗೆ ಚಪ್ಪಲಿ ಹಾರ ಹಾಕಿದ್ದು ಕಂಡುಬಂದಿದ್ದು, ಘಟನೆಯ ಬಗ್ಗೆ ತೀವ್ರ ಆಕ್ರೋಶಗೊಂಡ ಸಾರ್ವಜನಿಕರು ಕೆಲ ಹೊತ್ತು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತು. ನಂತರ ಗ್ರಾಮಸ್ಥರು ಹಾಗೂ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಮರಗುತ್ತಿ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ ಹತ್ತಿರ ಆಗಮಿಸಿ ಕಿಡಿಗೇಡಿಗಳನ್ನು ಬಂಧಿಸಿ, ಗ್ರಾಮದಲ್ಲಿ ಹೊಸ ಪುತ್ಥಳಿ ಸ್ಥಾಪನೆ ಮಾಡಬೇಕು ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ಸ್ಥಳಕ್ಕೆ ಶಾಸಕ ಮತ್ತಿಮೂಡ ಭೇಟಿ ನೀಡಿ, ಹೊಸ ಪುತ್ಥಳಿ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಮತ್ತು ಕೃತ್ಯೆಕೆ ಸಂಭಧಿಸಿದಂತೆ ಕಿಡಿಗೇಡಿ ಯಾರೆ ಆಗಿದರು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಎಸ್ಪಿ ತಿಳಿಸಿದರು. ಪುತ್ಥಳಿ ಪಕ್ಕದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಗ್ರಾಮ ಪಂಚಾಯತ್ ಸೂಚಿಸಿದ್ದೇನೆ ಎಂದು ತಿಳಿಸಿದರು.
ಸ್ಥಳಕ್ಕೆ ಎಸ್ಪಿ ಭೇಟಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ತಹಶೀಲ್ದಾರ್ ಅಂಜುಮ ತಬಸುಮ್ ಸ್ಥಳಕ್ಕೆ ಧಾವಿಸಿ ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸುವುದಾಗಿ ಪ್ರತಿಭಟನಾ ನಿರತ ಹೋರಟಗಾರರಿಗೆ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಪ್ರಕಾಶ ಹಾಗರಗಿ, ಕಾಂಗ್ರೆಸ್ ಮುಖಂಡ ವಿಜಯಕುಮಾರ ಜಿ.ರಾಮಕೃಷ್ಣ, ನಿಂಗಪ್ಪ ಪ್ರಬುದ್ಧಕರ್, ಅವಿನಾಶ , ವಿದ್ಯಾಧರ, ಗೋಪಾಲ ಗೊಬ್ಬರವಾಡಿ, ನಂದನಕುಮಾರ ಹರಸೂರ, ರಾಜು , ಸುಧೀರ ಹೊನ್ನಳ್ಳಿ, ಸಂಜುಕುಮಾರ, ಅಶೋಕಕುಮಾರ ಗೌರೆ, ಶ್ರೀನಿವಾಸ ಹೋಳಕರ್, ಸುಭಾಷ್ ಸೇರಿದಂತೆ ಮುಂತಾದವುರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…