ಬಿಸಿ ಬಿಸಿ ಸುದ್ದಿ

ರೇವೂರಗೆ ಸಚಿವ ಸ್ಥಾನ ಕೊಡದಿದ್ರೆ 10 ಶಾಸಕರ ರಾಜೀನಾಮೆ: ದೇಶಿಕೇಂದ್ರ ಸ್ವಾಮೀಜಿ

ಕಲಬುರಗಿ: ದಕ್ಷಿಣ ಮತ್ತ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಅವರಿಗೆ ಸಚಿವ ಸ್ಥಾನ ನೀಡದಿದ್ರೆ ಹತ್ತು ಜನ ಶಾಸಕರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಕೊಡಿಸುವುದಾಗಿ ಇಲ್ಲಿನ ಶ್ರೀಶೈಲ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಸಿಎಂ ಬಿ.ಎಸ್.ವೈಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

ನಗರದ ಎನ್.ವಿ.ಮೈದಾನದಲ್ಲಿ ನಡೆದಲ್ಲಿ ಶಾಸಕ ಪಾಟೀಲ್ ರೇವೂರ ಅವರ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸ್ವಾಮೀಜಿಗಳು, 20 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಬಿಜೆಪಿ ಅಂದ್ರೆ ಹಳೆ ನಾಯಿಯೂ ಕೇಳುತ್ತಿರಲಿಲ್ಲ. ಶಾಸಕ ಪಾಟಿಲ್ ತಂದೆ ಚಂದ್ರಶೇಖರ ಪಾಟೀಲ್ ತಮ್ಮ ಆಸ್ತಿಮಾರಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳಸಿದ್ದಾರೆ,

ಚಂದ್ರಶೇಖರ ಪಾಟೀಲ್ ಗೆ ಮಂತ್ರಿ ಆಗಬೇಕು ಎಂಬ ಆಸೆ ಇಟ್ಟುಕೊಂಡಿದರು, ಆದರೆ ಅವರಿಗೆ ಇದೇ ಸರಕಾರ ಅವಕಾಶ ನೀಡಲಿಲ್ಲ. ಅವರು ವಿಧಿವಶರಾಗಿದ್ದು,  ಈಗ ಇದೇ ಸರ್ಕಾರ ಅವರ ಮಗ ಶಾಸಕ ದತ್ತಾತ್ತೇಯ ಪಾಟೀಲ್ 3 ನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದು, ಬಿಜೆಪಿ ಸರಕಾರ ಸಚಿವರನ್ನಾಗಿ ಮಾಡುತಿಲ್ಲ ಎಂದು ವಿಶಾದ ವ್ಯಕ್ತಪಡಿಸಿದರು.

ಈಗ ಅವರ ಪುತ್ರನಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಸ್ವಾಮೀಜಿಗಳ ನಿಯೋಗ ಸಿಎಂ ಅವರನ್ನು ಭೇಟಿ ಮಾಡಿ ರೇವೂರ ಅವರನ್ನು ಸಚಿವರನ್ನಾಗಿ ಮಾಡಲು ಕೇಳಿದ್ದೆವು. ಆದ್ರೆ, ಸದ್ಯದ ಸ್ಥಿತಿಯಲ್ಲಿ ಸಾಧ್ಯವಿಲ್ಲ, ಒಂದು ವರ್ಷದಲ್ಲಿ ಸಚಿವರನ್ನಾಗಿ ಮಾಡುವುದಾಗಿ ಭರವಸೆ ಕೊಟ್ಟಿದ್ದಾರೆ. ಮಾತು ಕೊಟ್ಟಂತೆ ಮುಂದಿನ ವರ್ಷದ ಒಳಗಾಗಿ ದತ್ತಾತ್ರೇಯ ಪಾಟೀಲ್ ರೇವೂರಗೆ ಸಚಿವ ಸ್ಥಾನ ನೀಡಬೇಕು, ಸಚಿವ ಸ್ಥಾನ ಕೊಡದಿದ್ರೆ ಹತ್ತು ಶಾಸಕರ ರಾಜೀನಾಮೆ ಕೊಡಿಸುವ ಶಕ್ತಿ ನನ್ನ ಬಳಿ ಇದೆ ಎಂದು ಸಿಎಂಗೆ ಬಹಿರಂಗವಾಗಿಯೇ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ವೇದಿಕೆಯಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಯಿ, ಸಂಸದ ಡಾ. ಉಮೇಶ್ ಜಾಧವ್, ಕಂದಾಯ ಸಚಿವರಾದ ಆರ್. ಅಶೋಕ, ಶಾಸಕ ರಾಜುಗೌಡ, ಮಸವರಾಜ ಮತ್ತಿಮೂಡ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಸೇರಿದಂತೆ ಪಕ್ಷದ ಜಿಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago