ಬಿಸಿ ಬಿಸಿ ಸುದ್ದಿ

ಕಾಂಗ್ರೇಸ್ ಪಕ್ಷದ ಶಿಸ್ತಿನ ಸಿಪಾಯಿ ಶಿವಶರಣಪ್ಪ ಅಂಡಗಿ ಇನ್ನಿಲ್ಲ

ಕಲಬುರಗಿ: ಹಿರಿಯ ಕಾಂಗ್ರೇಸಿನ ಶಿಸ್ತಿನ ಸಿಪಾಯಿ ಜಿಪಂನ ಮಾಜಿ ಸದಸ್ಯ ಶಿವಶರಣಪ್ಪ ಅಂಡಗಿ (ವಯಸ್ಸು-೮೫) ಅವರು ಶನಿವಾರದಂದು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅನಾರೋಗ್ಯದ ಕಾರಣ ಕೊನೆಯುಸಿರೆಳೆದರು.

ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದೇವರಾಜ ಅರಸ್, ವೀರೇಂದ್ರ ಪಾಟೀಲ, ಎಂ.ವೀರಪ್ಪ ಮೊಯಿಲಿ, ಎನ್.ಧರ್ಮಸಿಂಗ್, ಕೇಂದ್ರದ ಮಾಜಿ ಸಚಿವ ಡಾ.ಎಂ.ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಬಾಬುರಾವ ಚಿಂಚನಸೂರ ಅವರೊಂದಿಗೆ ಉತ್ತಮ ಒಡನಾಡವನ್ನಿಟ್ಟುಕೊಂಡಿದ್ದ ಶಿವಶರಣಪ್ಪ ಅಂಡಗಿ ಅವರು ೨೦೦೦ ನೇ ಇಸವಿಯಲ್ಲಿ ಟೆಂಗಳಿ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು.

ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದ ರೈತ ಕುಟುಂಬದಲ್ಲಿ ಜನಿಸಿದ ಅಂಡಗಿ ಅವರು, ಅತ್ಯಂತ ಕಿರು ವಯಸ್ಸಿನಲ್ಲಿಯೇ ಧಾರ್ಮಿಕ, ಸಾಮಾಜಿಕ, ರಾಜಕೀಯ ಸೇರಿದಂತೆ ವಿವಿಧ ಸಮಾಜಮುಖಿ ಕ್ಷೇತ್ರಗಳಲ್ಲಿ ಜಾತಿ, ಮತ, ಪಂಗಡಗಳ ಮಧ್ಯದಲ್ಲಿ ಭೇದ-ಭಾವವಿಲ್ಲದೆ ಸರ್ವ ಜನಾಂಗದವರ ಪ್ರೀತಿ-ವಿಶ್ವಾಸವನ್ನು ಗಳಿಸಿದ್ದರು.
ಸುದೀರ್ಘ ೫೦ ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ಕಾಂಗ್ರೇಸ್ ಪಕ್ಷದ ಸಂಘಟನೆಯೇ ಜೀವನದ ಗುರಿ ಹೊಂದಿದ್ದ ದಿಟ್ಟ ಹೋರಾಟಗಾರರಾಗಿದ್ದರು.

ಹಿರಿಯ ಕಾಂಗ್ರೇಸ್ಸಿನ ಶಿಸ್ತಿನ ಸಿಪಾಯಿಯಾಗಿದ್ದುಕೊಂಡು ತಮ್ಮ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಿಗೆ ಅಭಿವೃದ್ಧಿ ಪಥದಲ್ಲಿ ಸರಕಾರದ ವಿವಿಧ ಯೋಜನೆಗಳು ಮನೆ-ಮನೆಗೆ ಮುಟ್ಟಿಸುವಂಥ ಸಮರ್ಥ ಜೀವಿಯೆನಿಸಿಕೊಂಡಿದ್ದರು. ಚಿತ್ತಾಪುರ ತಾಲೂಕಾ ಬೋರ್ಡ (ಟಿ.ಡಿ.ಬಿ) ಸದಸ್ಯರಾಗಿ ಐದು ವರ್ಷಗಳ ಅವಧಿಯಲ್ಲಿ ಹಳ್ಳಿಗಳ ಅಭಿವೃದ್ಧಿ ಮಾಡಿದ ಕೀರ್ತಿಯೂ ಸಹ ಇವರಿಗೆ ಸಲ್ಲುತ್ತದೆ. ೧೯೮೫ ರಿಂದ ೧೯೯೧ರ ವರೆಗೆ ತಾಲೂಕಾ ಕೃಷಿ ಹಾಗೂ ಗ್ರಾಮೀಣ ಅಭಿವೃದ್ದಿ ಬ್ಯಾಂಕಿನ ಉಪಾಧ್ಯಕ್ಷರಾಗಿ ರೈತರಿಗೆ ಬ್ಯಾಂಕಿನಿಂದ ವಿವಿಧ ರೀತಿಯ ಸರಕಾರದ ಸೌಲಭ್ಯಗಳನ್ನು ಒದಗಿಸಿಕೊಟ್ಟಿದ್ದು, ಜನ ಇನ್ನೂ ಮರೆತಿಲ್ಲ.

ಕಾಂಗ್ರೇಸ್ ಪಕ್ಷದ ಹಿರಿಯ ಕಾಂಗ್ರೇಸ್ಸಿಗ ಶಿವಶರಣಪ್ಪ ಅಂಡಗಿ ಅವರು ದಿವಂಗತರಾಗಿದ್ದರಿಂದ ಪಕ್ಷದಲ್ಲಿ ಒಂದಿಷ್ಟು ಸಂಘಟನೆಯ ಕೊರತೆಯು ಕೂಡ ಕಾಣುತ್ತದೆ ಎಂಬುದು ಪಕ್ಷದ ಮುಖಂಡರ ಅಭಿಪ್ರಾಯವಾಗಿದೆ. ರವಿವಾರದಂದು ಸಾಯಂಕಾಲ ೪ ಗಂಟೆಗೆ ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಸ್ವಂತ ಹೊಲದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ದಿ.ಶಿವಶರಣಪ್ಪ ಅಂಡಗಿ ಅವರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ.

ಅಂಡಗಿ ನಿಧನಕ್ಕೆ ಹಲವರ ಶೋಕ: ಹಿರಿಯ ಕಾಂಗ್ರೇಸ್ಸಿಗ ಶಿವಶರಣಪ್ಪ ಅಂಡಗಿ ಅವರ ನಿಧನ ಹೊಂದಿದ್ದಕ್ಕೆ ಕೇಂದ್ರದ ಮಾಜಿ ಸಚಿವ ಡಾ.ಎಂ.ಮಲ್ಲಿಕಾರ್ಜುನ ಖರ್ಗೆ, ಸಂಸದ ಡಾ.ಉಮೇಶ ಜಾಧವ, ಮಾಜಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಬಾಬುರಾವ ಚಿಂಚನಸೂರ, ಮಾಜಿ ಎಂಎಲ್ಸಿ ಅಲ್ಲಮಪ್ರಭು ಪಾಟೀಲ, ಕಾಂಗ್ರೇಸ್ ಅಧ್ಯಕ್ಷ ಜಗದದೇವ ಗುತ್ತೇದಾರ, ಜಿಪಂ ಮಾಜಿ ಸದಸ್ಯ ಭೀಮರಾವ ಟಿ.ಟಿ., ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ, ಬಿ.ಎಂ.ಪಾಟೀಲ ಕಲ್ಲೂರ, ವಿನೋದ ಜೇನವೇರಿ, ಸಂಗಮೇಶ ಕರಡಿ, ಬಿ.ಎನ್.ಪುಣ್ಯಶೆಟ್ಟಿ, ಉಮೇಶ ಶೆಟ್ಟಿ ಸೇರಿದಂತೆ ಅನೇಕರು ಶೋಕ ವ್ಯಕ್ತಿಪಡಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago