ಬಿಸಿ ಬಿಸಿ ಸುದ್ದಿ

ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುರಪುರ: ಸಗರನಾಡಿನ ನಗರ ಮತ್ತು ಗ್ರಾಮೀಣಾಭಿವೃಧ್ಧಿ ಸಂಸ್ಥೆಯಿಂದ ಛತ್ರಪತಿ ಶಿವಾಜಿಮ ಮಹಾರಾಜರ ಜಯಂತ್ಯೋತ್ಸವದ ಅಂಗವಾಗಿ ತಾಲೂಕಿನ ಹಾವಿನಾಳ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಸಲಾಯಿತು. ತಾಲೂಕು ಪಂಚಾಯತಿ ಸದಸ್ಯ ನಂದನಗೌಡ ಪಾಟೀಲ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ್ ಭೀಮಣ್ಣ ಮಾಸ್ತರ ಸಿಆರ್‌ಪಿ ಮಾತನಾಡಿ,ಛತ್ರಪತಿ ಶಿವಾಜಿ ಮಹಾರಾಜರು ಭಾರತೀಯ ಇತಿಹಾಸದಲ್ಲಿ ಅಚ್ಚಾಗಿರುವ ಕೆಚ್ಚೆದಯ ಅರಸನಾಗಿದ್ದು,ತನ್ನ ಆಡಳಿತದ ಸಂದರ್ಭದಲ್ಲಿ ಬ್ರಿಟೀಷರು ಮತ್ತಿತರೆ ಅರಸರುಗಳಿಗೆ ಸಿಂಹ ಸ್ವಪ್ನವಾಗಿದ್ದರು.ಅಲ್ಲದೆ ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿದು ಇಂದಿಗೂ ಎಲ್ಲರಿಗೂ ದೇಶಪ್ರೇಮದಲ್ಲಿ ಆದರ್ಶರಾಗಿದ್ದಾರೆ ಎಂದರು.ಅಲ್ಲದೆ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಇಂದು ಯುವಕರು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು ಸಂತೋಷದ ಸಂಗತಿಯಾಗಿದೆ ಎಂದರು.

ಶಿಬಿರದಲ್ಲಿ ಭಾಗವಹಿಸಿದ್ದ ವೈದ್ಯರಾದ ಎನ್.ಎಂ.ರಾಯಲ್ ಮತ್ತು ಡಾ: ಅಂಬ್ರೇಶ ಮಾತನಾಡಿ,ಇಂದು ಅನೇಕ ಜನರು ನಿತ್ಯವು ಒಂದಿಲ್ಲೊಂದು ಕಾಯಿಲೆಗಳಿಂದ ಬಳಲುತ್ತಿರುತ್ತಾರೆ.ಇದನ್ನು ಮನಗಂಡಿರುವ ಸಗರನಾಡು ನಗರ ಮತ್ತು ಗ್ರಾಮೀಣಾಭಿವೃಧ್‌ಧಿ ಸಂಸ್ಥೆಯವರು ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳುವ ಮೂಲಕ ಉತ್ತಮವಾದ ಸೇವೆಗೆ ಮುಂದಾಗಿದ್ದಾರೆ ಎಂದರು.ಇಂತಹ ತಪಾಸಣೆಗಳ ಮೂಲಕ ಗ್ರಾಮೀಣ ಭಾಗದ ಜನರಲ್ಲಿ ಆರೋಗ್ಯ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಬಹುದು ಮತ್ತು ಕಾಯಿಲೆಗಳಿಗೂ ಪರಿಹಾರ ದೊರಕಿಸಿದಂತಾಗಲಿದೆ.ಸಂಸ್ಥೆಯ ಕಾರ್ಯ ಇತರೆ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು.ಇದೇ ಸಂದರ್ಭದಲ್ಲಿ ಮುಖಂಡ ದುರ್ಗಪ್ಪ ಮಾಸ್ತರ ಮಾತನಾಡಿದರು.ನಂತರ ನಡೆದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಎರಡು ನೂರಕ್ಕು ಹೆಚ್ಚು ಜನರು ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸ್ಥಳಿಯ ಗ್ರಾ.ಪಂ ಅಧ್ಯಕ್ಷ ವೈಜನಾಥ ಸಾಹುಕಾರ,ಯಂಕಣ್ಣ ಮಾಸ್ತಾರ,ಕರಿಯಪ್ಪ ಅಂಬಿಗ,ಬಲಭೀಮ ಸಾಳುಂಕೆ,ದುರ್ಗಪ್ಪ ಪೂಜಾರಿ,ಮಲ್ಲಣ್ಣ ಕಲ್ಮನಿ,ಲಕ್ಷ್ಮೀಕಾಂತ ಸಾಳುಂಕೆ,ವೀರೇಶ ಬಾಗಲಿ,ಆನಂದ ಮಡ್ಡಿ,ಆನಂದರಾವ್,ಶರಣಬಸವ ಸೇರಿದಂತೆ ಇನ್ನಿತರರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago