ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಸಂದರ್ಭದಲ್ಲಿ ಕಲಬುರಗಿಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಿರುವಂತೆ ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಮತ್ತು ಅನುಚ್ಛೇದ ೩೭೧ನೇ(ಜೆ) ಕಲಂ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ರಚನೆ ಮಾಡುವುದರ ಬಗ್ಗೆ ಬರುವ ಬಜೆಟ್ ನಲ್ಲಿ ಅಧಿಕೃತ ಕ್ರಮಗಳನ್ನು ಕೈಗೊಳ್ಳಬೇಕು. ೩೭೧ನೇ(ಜೆ) ಕಾಲಂನಲ್ಲಿರುವ ದೋಷಗಳ ನಿವಾರಣೆಗೆ ತಕ್ಷಣ ಕ್ರಮ ಕೈಗೊಳ್ಳಲು ಹಾಗೂ ಪ್ರಗತಿಗೆ ಹೆಚ್ಚಿನ ಅನುದಾನ ಘೋಷಣೆ ಮಾಡಿ ಕಾಲಮಿತಿಯಲ್ಲಿ ನಮ್ಮ ಪ್ರದೇಶದ ಅಭಿವೃದ್ಧಿ ಕೈಗೊಳ್ಳಲು ಹೈದ್ರಾಬಾದ ಕರ್ನಾಟಕ ಜನಪರ ಸಂಘರ್ಷ ಸಮಿತಿ ಕಲ್ಯಾಣ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಸಿಎಂಗೆ ಮನವಿ ಮಾಡಿದ್ದಾರೆ.
ಕಲ್ಯಾಣ ಕರ್ನಾಟಕದ ಬೇಡಿಕೆಗಳ ಬಗ್ಗೆ ಸಚಿವರು, ಸಂಸದರು, ಶಾಸಕರು ಅತಿ ಗಂಭೀರವಾಗಿ ಪರಿಗಣಿಸಿ ರಾಜಕಿಯ ಇಚ್ಛಾಶಕ್ತಿ ಪ್ರದರ್ಶಿಸಲು ಸಮಿತಿ ಆಗ್ರಹಿಸುತ್ತದ್ದು, ಸಮಿತಿ ಈಗಾಗಲೇ ಮುಖ್ಯಮಂತ್ರಿಗಳಿಗೆ ಮತ್ತು ಸಂಬಂಧಪಟ್ಟ ಉನ್ನತ ಅಧಿಕಾರಿಗಳಿಗೆ ಅಧಿಕೃತ ಪತ್ರ ಬರೆದಿದ್ದು ಒತ್ತಾಯಿಸಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಬರುವ ಬಜೆಟ್ ನಲ್ಲಿ ಈ ಬಗ್ಗೆ ಸ್ಪಂದನೆ ಸಿಗದಿದ್ದರೆ ಸಮಿತಿ ತನ್ನ ಪೂರ್ಣ ನಿರ್ಧಾರಿತ ಕಾರ್ಯಕ್ರಮದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲಾ ಶಾಸಕರ ಸಭೆಯನ್ನು ಕರೆದು ನಮ್ಮ ಭಾಗದ ರಚನಾತ್ಮಕ ಪ್ರಗತಿಯ ಬಗ್ಗೆ ಮುಂದಿನ ರೂಪ ರೇಷೆಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…