ಬಿಸಿ ಬಿಸಿ ಸುದ್ದಿ

ಮಾಧ್ಯಮಗಳ ಮೇಲಿನ ನಿಷೇಧ ವಾಪಸ್ ಪಡೆಯಲು ಶಾಸಕ ಪ್ರಿಯಾಂಕ್ ಖರ್ಗೆ ಮನವಿ

ಕಲಬುರಗಿ: ಪ್ರಜಾತಂತ್ರ ವ್ಯವಸ್ಥೆಯ ನಾಲ್ಕನೆಯ ಅಂಗ ಎಂದು ಪರಿಗಣಿಸಲ್ಪಡುವ ಮಾಧ್ಯಮವನ್ನು ಪ್ರಸ್ತುತ ನಡೆಯುತ್ತಿರುವ ಕಲಾಪಕ್ಕೆ ನಿರ್ಬಂಧಿಸುವುದು ಸಮಂಜಸವಾದ ಕ್ರಮವಲ್ಲ  ಹಾಗಾಗಿ ಈ ಕೂಡಲೇ ನಿರ್ಬಂಧವನ್ನು ವಾಪಸ್ ಪಡೆಯುವಂತೆ  ಶಾಸಕರಾದ ‌ ಪ್ರಿಯಾಂಕ್ ಖರ್ಗೆ ಅವರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಸಂವಿಧಾನದ ಆಶಯದ ಕುರಿತು ವಿಧಾನಸಭೆ ಕಲಾಪದಲ್ಲಿ ಚರ್ಚಿಸಲು ನಿರ್ಧರಿಸಿದ್ದು ಸ್ವಾಗತಾರ್ಹ ಬೆಳವಣಿಗೆ. ಆದರೆ, ಪ್ರಜಾತಂತ್ರ ವ್ಯವಸ್ಥೆಯ ನಾಲ್ಕನೆಯ ಅಂಗವಾದ ಮಾಧ್ಯಮದ ( ಎಲೆಕ್ಟ್ರಾನಿಕ್ ಹಾಗೂ ಪ್ರಿಂಟ್) ಪ್ರತಿನಿಧಿಗಳಿಗೆ ಕಲಾಪದ ಒಳಗಡೆ ಪ್ರವೇಶ ನಿರ್ಬಂಧಿಸಿರುವ ಕ್ರಮ ಸರಿಯಾದುದದಲ್ಲ.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಆಯ್ಕೆಯಾದ ಜನಪ್ರತಿನಿಧಿಗಳು ಕಲಾಪದಲ್ಲಿ ಪಾಲ್ಗೊಂಡು ಜನರ ಸಮಸ್ಯೆಗಳನ್ನು ಚರ್ಚಿಸುವ ಹಾಗೂ ಪರಿಹಾರ ಕಂಡುಕೊಳ್ಳುವ ಬಗ್ಗೆ ಜನರು ತಿಳಿದುಕೊಳ್ಳಬೇಕು ಅದು ಕೇವಲ ಮಾಧ್ಯಮಗಳಿಂದ ಸಾಧ್ಯ ಹಾಗಾಗಿ ಮಾಧ್ಯಮಗಳಿಗೆ ನಿರ್ಬಂಧಿಸಿದರೆ ಸ್ವಾತಂತ್ರ್ಯಕ್ಕೆ ಧಕ್ಕೆ ತರುವುದರ ಜೊತೆಗೆ ಜನರಿಗೆ ಕಲಾಪಗಳ ಮಾಹಿತಿ ದೊರಕದಂತೆ ತಡೆದಂತಾಗುತ್ತದೆ ಹಾಗಾಗಿ ಮಾಧ್ಯಮಗಳಿಗೆ ವರದಿ ಮಾಡಲು ಅವಕಾಶ ನೀಡಬೇಕೆಂದು ಅವರು ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 second ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

2 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago