ಕಲಬುರಗಿ: ಸೇಡಂ ತಾಲ್ಲೂಕಿನ ರಂಜೋಳ ಗ್ರಾಮದ 11ವರ್ಷದ ಬಾಲಕಿಯೋರ್ವಳು ವಿಷಪೂರಿತ ಹುಳು ಕಚ್ಚಿ ಮೃತಪಟ್ಟಿರುವ ಘಟನೆ ನಡೆದಿದೆ.
ಐಶ್ವರ್ಯ ಮಲ್ಲಪ್ಪ ಸಾವನ್ನಪ್ಪಿವ ಬಾಲಕಿ, ಶನಿವಾರದಂದು ಹುಳು ಕಚ್ಚಿದ್ದು, ಅಂದೇ ಸೇಡಂ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಕಲಬುರಗಿ ಆಸ್ಪತ್ರೆಗೆ ಕಳುಹಿಸಿದ್ದು, ನಿನ್ನೆ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.
ಸೇಡಂ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯದಿಂದ ತಮ್ಮ ಮಗಳು ಸಾವನ್ನಪ್ಪಿದ್ದಾಳೆಂದು ಪಾಲಕರು ಮತ್ತು ಸ್ಥಳೀಯರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ಆಸ್ಪತ್ರೆಯಲ್ಲಿ ಸೂಕ್ತ ಸ್ಪಂದನೆ ಸಿಗಲಿಲ್ಲ. ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲು ಆ್ಯಂಬುಲೆನ್ಸ್ ಇದ್ದರೂ ಕಳಿಸಲಿಲ್ಲ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿ, ಬಾಲಕಿಯ ಸಾವಿಗೆ ಕಾರಣರಾದ ವೈದ್ಯೆಯನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಪಿಎಸ್‌ಐ ಸುಶೀಲ್ ಕುಮಾರ್ ಸಂಧಾನಕ್ಕೆ ಯತ್ನಿಸಿದರು ಮಣಿಯದೆ ಪೋಷಕರು, ಆಸ್ಪತ್ರೆ ಮುಂಭಾಗದಲ್ಲಿ ಧರಣಿ ನಡೆಸಿರೆ ಎಂದು ತಿಳಿದುಬಂದಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…