ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ

0
138

ಬೆಂಗಳೂರು: ಚಲಿಸುತ್ತಿದ್ದ, ಬಸ್ಸಿಗೆ ಎಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರಿನಿಂದ ತಮಿಳುನಾಡಿನ ತಿರುಪತ್ತೂರಿ ಮಾರ್ಗದ ಮಧ್ಯೆ ನಡೆದಿದ್ದು, ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿ ಇದ್ದ 25ಕ್ಕೂ ಹೆಚ್ಚು ಪ್ರಯಾಣಿಕರ ಭಾರಿ ಅಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ತಮಿಳುನಾಡಿನ ತಿರುಪತ್ತೂರಿಗೆ ತೆರಳುತ್ತಿದ್ದ ಶರ್ಮಾ ಟ್ರಾವೆಲ್​​, ಎಕಾ ಏಕಿ ಬೆಂಕಿ ಕಾಣಿಸಿಕೊಂಡಿರುವುದರಿಂದ ಇಡಿ ಬಸ್ಸ್ ಬೆಂಕಿಗೆ ಆಹುತಿಯಾದ ಘಟನೆ ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ನಡೆದಿದೆ.

Contact Your\'s Advertisement; 9902492681

ಬಸ್ ಮೇಲ್ಭಾಗದಲ್ಲಿ ಇಟ್ಟಿದ್ದ ಲಗೇಜ್​​ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ಈ ವೇಳೆ ಹಿಂದೆ ಬರುತ್ತಿದ್ದ ವಾಹನ ಸವಾರ, ಬಸ್ ಚಾಲಕನಿಗೆ ಮಾಹಿತಿ ನೀಡಿದರೆಂದ. ಬಸ್ ಚಾಲಕ ಹಾಗೂ ನಿರ್ವಾಹಕ ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದರಿಂದ ಭಾರಿ ಅನಾಹುತ ತಪ್ಪಿದು, ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಹಾನಿ ಉಂಟಾಗಿಲ್ಲ.

ನಂತರ ಕ್ಷಣಾರ್ಧದಲ್ಲಿ ಬಸ್ ಸಂಪೂರ್ಣ ಹೊತ್ತಿ ಉರಿದಿದ್ದ ಕಾರಣ ಬಸ್​​ನಲ್ಲಿ ಇದ್ದ ಪ್ರಯಾಣಿಕರ  ಪಾರ್ಸೆಲ್ ಹಾಗೂ ಲಗೇಜ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು ಬೆಂಕಿಯನ್ನು ನಂದಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಸೂಳಗಿರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here