ಬಿಸಿ ಬಿಸಿ ಸುದ್ದಿ

ಸ್ವಾತಂತ್ರ್ಯ ಹೋರಾಟಗಾರರ ದೊರೆಸ್ವಾಮಿಗೆ ಶಾಸಕ ಯತ್ನಾಳ ಅವಮಾನ: ಪ್ರಗತಿಪರ ಸಾಹಿತಿಗಳಿಂದ ಪ್ರತಿಭಟನೆ

ಕಲಬುರಗಿ: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಅವರಿಗೆ ಅವಹೇಳನಕಾರಿಯಾಗಿ ಮಾತನಾಡಿದ ಶಾಸಕ ಯಾತ್ನಾಳ ಮತ್ತು ಅವರನ್ನು ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿ ಸಂಘಪರಿವಾರದ ನೀತಿಯನ್ನು ಖಂಡಿಸಿ ಇಂದು ನಗರದಲ್ಲಿ ಪ್ರಗತಿಪರ ಸಂಘಟನೆ  ಒಕ್ಕೂಟ, ಸಂವಿಧಾನಪರ ಸಂಘಟನೆಗಳ ಒಕ್ಕೂಟ ಮತ್ತು ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ರೀತಿಯಲ್ಲಿ ಭಾಗವಹಿಸದ ಆರ್.ಎಸ್.ಎಸ್. ಮತ್ತು ಸಂಘಪರಿವಾರದವರಿಗೆ ಸ್ವಾತಂತ್ರ್ಯ ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ಕಂಡರೆ ಮೊದಲಿನಿಂದಲೂ ಅಷ್ಟಕ್ಕಷ್ಟೇ, ಸ್ವಾತಂತ್ರ್ಯ ಹೋರಾಟದ ಸಂದಭದಲ್ಲಿ ಬ್ರಿಟೀಷರ ಪರವಾಗಿದ್ದ ಸಂಘಿಗಳು ಇಂದು ದೇಶೀಯ ಮತ್ತು ವಿದೇಶಿ ಬಹುರಾಷ್ಟ್ರೀಯ ಕಾರ್ಪೊರೇಟ್ ಕಂಪನಿಗಳ ಪರವಾಗಿ ಕೆಲಸಮಾಡುತ್ತಿದ್ದಾರೆ ಎಂದು ಪ್ರೊ.ಆರ್.ಕೆ.ಹುಡಗಿ ಆರೋಪಿಸಿದರು.

ದೇಶದ ಜನರ ಸಾಮಾನ್ಯರ, ರೈತರ, ಕಾರ್ಮಿಕರ, ವಿದ್ಯಾರ್ಥಿ-ಯುವಕರ, ಮಹಿಳೆಯರ ಹಕ್ಕುಗಳ ಬಗ್ಗೆ ಮಾತನಾಡುವವರು, ಸರಕಾರದ ಜನ ವಿರೋಧಿ ನೀತಿಗಳನ್ನು ವಿರೋಧಿಸುವವರಿಗೆ ದೇಶದ್ರೋಹದ, ಪಾಕಿಸ್ತಾನಪರ, ಅರ್ಬನ್ ನಕ್ಸಲ್ ಎನ್ನುವಂತೆ ಬಿಂಬಿಸುತ್ತಾ ಅವರನ್ನು ಜೈಲಿಗೆ ಹಾಕಲಾಗುತ್ತಿದೆ ಎಂದರು.

ಇದರ ಭಾಗವಾಗಿ ಯಾತ್ನಾಳ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಸ್.ದೊರೆಸ್ವಾಮಿಯವರ ಕುರಿತು ಕೆಟ್ಟದಾಗಿ ಮಾತನಾಡಿದ್ದು, ಮತ್ತು ಅದನ್ನು ಕೆಲ ಬಿಜೆಪಿಯ ಹಿರಿಯ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಉಳಿದ ಪಕ್ಷದ ನಾಯಕರು ಯಾವದೇ ಪ್ರತಿಕ್ರಿಯೆ ನೀಡದೇ ಮೌನವಹಿಸಿದ್ದಾರೆ.

ಬಿಜೆಪಿ ನಾಯಕರಿಗೆ, ಸಾತಂತ್ರ್ಯದ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಯಾತ್ನಾಳ ಹೇಳಿಕೆಯನ್ನು ಖಂಡಿಸಿ, ಅವರ ವಿರುದ್ಧ ಕ್ರಮ ಕೈಗೊಂಡು, ಶಾಸಕ ಸ್ಥಾನದಿಂದ ರಾಜಿನಾಮೆ ಪಡೆಯಬೇಕೆಂದು  ಪ್ರತಿಭಟನಾ ನಿರತ ಹೋರಾಟಗಾರರ ಆಗ್ರಹಿಸಿದ್ದಾರೆ.

ಈ ವೇಳೆಯಲ್ಲಿ ಡಾ.ಸಿದ್ದನಗೌಡ ಪಾಟೀಲ್, ನಗೌಡ ಪಾಟೀಲ್, ಕೆ.ನೀಲಾ, ಅರ್ಜುನಭದ್ರೆ, ಎಂ. ಗೋಖಲೆ, ಭೀಮಾಶಂಕರ ಮಾಡಿಯಾಳ, ಮಾರುತಿ ಗೋಖಲೆ,  ಸನತಕುಮಾರ ಬೆಳಗಲಿ, ದತ್ತಾತ್ರೇಯ ಇಕ್ಕಳಲಿ, ಡಾ ಮಹೇಶ್ ರಾಠೋಡ್, ಅಶ್ವಿನಿ ಮದನಕರ್,  ಲಕ್ಷ್ಮೀಕಾಂತ ಹುಬ್ಬಳ್ಳಿ, ಪ್ರಭುದೇವ ಯಳಸಂಗಿ, ಹೆಚ್.ಎಸ.ಪತಕಿ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

19 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

19 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago