ಕಲಬುರಗಿ: ನಗರದ ಹಫ್ತ್ ಗುಂಬಜ್ ಪ್ರದೇಶದಲ್ಲಿ ಗೋಡೆಯೊಂದರ ಮೇಲೆ ಪಾಕಿಸ್ತಾನ್ ಪರ ಮತ್ತು ಮೋದಿ ವಿರುದ್ಧ ಅವಾಚ್ಯ ಬರಹಗಳು ಬರೆಯಲಾಗಿರುವ ಘಟನೆ ವೇಳೆಯಲ್ಲಿ ಕಿಡಿಗೇಡಿಗಳು ಮತ್ತೊಂದು ಕೃತ್ಯ ಎಸಗಲು ಸಂಚು ರೂಪಿಸಿದರು ಎನ್ನುವ ಅಂಶ ಬೆಳಕಿಗೆ ಬಂದಿದೆ.
ಗೋಡೆಯ ಮೇಲೆ ಬರೆದ ನಂತರ ಕಾರಿಗೂ ಬೆಂಕಿ ಹಚ್ಚಲು ದುಷ್ಕರ್ಮಿಗಳು ಯತ್ನಿಸಿದ್ದರು ಎನ್ನಲಾಗುತ್ತಿದ್ದು, ಕಿಶನ್‌ರಾವ್ ಮನೆ ಎದುರಿನ ಅಬ್ದುಲ್ಲಾ ಅವರ ಕಾರು ನಿಲ್ಲಿಸಲಾಗಿತ್ತು. ಈ ಕಾರಿಗೆ ಬೆಂಕಿ ಹಚ್ಚಲು ದುಷ್ಕರ್ಮಿಗಳು ಸಂಚು ರೂಪಿಸಿದ್ದರು ಎಂಬ ಅಂಶ ಕೆಳಿಬರುತ್ತಿದೆ.
ಘಟನೆಯ ಮನೆಯ ಸುತ್ತ-ಮುತ್ತ ಯಾವುದೇ ಸಿಸಿ ಕ್ಯಾಮೆರಾ ಇಲ್ಲದಿರುವ ಬಗ್ಗೆ ಮಾಹಿತಿ ಮೆರಗಿ, ಈ ಕೃತ್ಯ ನಡೆದಿದೆ ಎಂದು ಅನುಮಾನ ವ್ಯಕ್ತವಾಗುತ್ತಿದ್ದು, ಚೌಕ್ ಪೊಲೀಸ್ ಠಾಣೆಯಲ್ಲಿ ರಾಜದ್ರೋಹ, ಕೋಮು ಗಲಭೆಗೆ ಯತ್ನ, ಪ್ರಚೋದನೆ ಸಂಬಂಧ ಐಪಿಸಿ ಸೆಕ್ಷನ್ 153(ಎ), 153(ಬಿ), 124(ಎ) ಹಾಗೂ 505 (2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಕರಿತು ತನಿಖೆ ನಡೆಸಿದ್ದಾರೆ.
ಸದ್ಯ ಘಟನಾ ಸ್ಥಳದಲ್ಲಿ ಮುನ್ನಚರೆಕೆ ಕ್ರಮವಾಗಿ ಪೊಲೀಸರು ನಿಯೋಜಿಸಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…