ರಾಯಚೂರು: ಮಾರ್ಚ್ 5ರಂದು ಆರಂಭವಾಗುವ ಅಧಿವೇಶನದಲ್ಲಿ ಶಾಸಕರುಗಳು ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್, ಬಸ್ ಪಾಸ್, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮಾಸಿಕ 3500 ರೂಪಾಯಿ ಆಹಾರ ಭತ್ತೆ ನೀಡಬೇಕೆಂದು ಎಂದು ಜಿಲ್ಲಾದ್ಯಾಂತ ಎಸ್.ಎಫ್.ಐ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ ಒತ್ತಾಯಿಸಿದೆ.
ಕೊಠಾರಿ ಆಯೋಗದ ಶಿಫಾರಸಿನಂತೆ ರಾಜ್ಯ ಬಜೆಟ್ ನಲ್ಲಿ 30% ಹಣವನ್ನು ಮೀಸಲಿಡುವ ಬಗ್ಗೆ ಅಧಿವೇಶನದಲ್ಲಿ ಶಾಸಕರುಗಳು ಚರ್ಚಿಸಬೇಕೆಂದು, ಬೇಡಿಕೆಯ ಜಾರಿಗೆ ಕ್ರಮಕೈಗೊಳ್ಳಬೇಕೆಂದು ಹಾಗೂ ಸಿರವಾರ ತಾಲೂಕಿಗೆ ಸರ್ಕಾರಿ ಡಿಪ್ಲೊಮಾ, ಐಟಿಐ ಕಾಲೇಜು, ಹಾಸ್ಟೆಲ್ ಸೇರಿ ತಾಲೂಕಿನ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ಒತ್ತಾಯಿಸಿ ಸಿರವಾರ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಬೃಹತ್ ಹೋರಾಟವನ್ನು ಮಾಡಿ ತಹಶಿಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ SFI ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಮಾತನಾಡಿದರು. ತಾಲೂಕು ಅಧ್ಯಕ್ಷ ಚಿದಾನಂದ ಕರಿಗೂಳಿ, ಕಾರ್ಯದರ್ಶಿ ಪ್ರವೀಣ್ ಕುಮಾರ್, ಮುಖಂಡರಾದ ಸುನೀಲ್ ಕುಮಾರ್ ಹಣಿಗಿ, ಪ್ರತಾಪ್, ಸುದರ್ಶನ್ ಹಾಗೂ DYFI ರಾಜ್ಯ ಸಮಿತಿ ಸದಸ್ಯರಾದ ಚಂದ್ರಶೇಖರಗೌಡ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸಂಧರ್ಭದಲ್ಲಿ SFI ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್, ಮುಖಂಡರಾದ ದೀಲ್ ಶಾದ್, ಉಮೇಶ ನಾಯಕ, ಖಾಸಂಬಿ ಸೇರಿದಂತೆ ವಿದ್ಯಾರ್ಥಿಗಳುಭಾಗವಹಿಸಿದ್ದರು.
ಲಿಂಗಸ್ಗೂರು ಶಾಸಕರ ಕಛೇರಿ ಮುಂದೆ ಹೋರಾಟವನ್ನು ಮಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಮತ್ತು ಶಾಸಕರ ಸಹಾಯಜರ ಮೂಲಕ ಮನವಿಯನ್ನು ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ SFI ಜಿಲ್ಲಾ ಅಧ್ಯಕ್ಷರಾ ರಮೇಶ ವೀರಾಪುರ, DYFI ರಾಜ್ಯ ಸಮಿತಿ ಸದಸ್ಯರಾದ ಶಿವಪ್ಪ ಬ್ಯಾಗವಾಟ್ ಸೇರಿದಂತೆ ಅನೇಕರಿದ್ದರು.
ರಾಜ್ಯದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ಒತ್ತಾಯಿಸಿ, ರಾಜ್ಯದ ವಿವಿಧೆಡೆ SFI ನೇತೃತ್ವದಲ್ಲಿ ಕೋಲಾರ, ರಾಯಚೂರು, ಹಾವೇರಿ ಕೊಪ್ಪಳ, ಕಲ್ಬುರ್ಗಿ, ಯಾದಗಿರಿ, ಹೊಸಪೇಟೆ, ಗಂಗಾವತಿ, ಸಿರವಾರ, ಲಿಂಗಸ್ಗೂರು, ಆನೇಕಲ್, ಶಹಾಪುರ, ಶಿಗ್ಗಾಂವ್, ಕನಕಗಿರಿ, ರಾಣಿಬೆನ್ನೂರು, ಶ್ರಿನಿವಾಸಪುರ, ಚಿಕ್ಕಬುಳ್ಖಾಪುರ ಸೇರಿದಂತೆ ರಾಜ್ಯದಾದ್ಯಂತ ಬೃಹತ್ ಹೋರಾಟವನ್ನು ಮಾಡಿ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕರ, ತಹಶಿಲ್ದಾರರ ಮತ್ತು ಇತರ ಸಂಬಂಧಿಸಿದ ಅಧಿಕಾರ ಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…