ಕಲಬುರಗಿ: ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿನ ಮೂಲಭೂತ ಸೌಕರ್ಯ ಹಾಗೂ ಕುಂದುಕೊರತೆಗಳ ಪಟ್ಟಿಯನ್ನು ಎರಡು ದಿನದೊಳಗಾಗಿ ಸಲ್ಲಿಸಲ್ಲಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯೆ ಡಾ. ಜಯಶ್ರೀ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಸೋಮವಾರ ಕಲಬುರಗಿ ಜಿಲ್ಲಾ ಪಂಚಾಯತ್ ಹಳೆ ಕಟ್ಟಡದ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಮುಖ್ಯವಾಗಿ ಶಾಲೆಗಳಲ್ಲಿರುವ ಕುಡಿಯುವ ನೀರು, ಶೌಚಾಲಯ, ಕಟ್ಟಡ ನಿರ್ಮಾಣ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮಗೊಳಿಸಲು ಕ್ರಮವಹಿಸಬೇಕೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಪ್ರತಿ ತಿಂಗಳ ಬಾಲಕಾರ್ಮಿಕರ ಪತ್ತೆದಾಳಿ ಮಾಡಿದ ನಂತರ ರಕ್ಷಿಸಲಾದ ಮಕ್ಕಳನ್ನು ಸಿಡಬ್ಲ್ಯೂಸಿ ಸಭೆಗೆ ಹಾಜರುಪಡಿಸಬೇಕು. ಬಾಲಕಾರ್ಮಿಕ ಪದ್ಧತಿ ತಡೆಯಲು ಜಿಲ್ಲೆಯಲ್ಲಿ ಎಲ್ಲ ಮಕ್ಕಳನ್ನು ಶಾಲೆಗೆ ಕಳುಹಿಸಲು ಅರಿವು ಕಾರ್ಯಕ್ರಮ ಏರ್ಪಡಿಸಬೇಕು. ಪೋಕ್ಸೋ ಪ್ರಕರಣದಡಿ ದಾಖಲಾದ ಪ್ರಕರಣಗಳ ಮಾಹಿತಿಯನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ವರದಿಯನ್ನು ಸಲ್ಲಿಸಬೇಕೆಂದರು.
ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯ ಇಲಾಖೆಅಡಿಯಲ್ಲಿ ನಡೆಯುತ್ತಿರುವ ವಸತಿನಿಲಯಗಳಲ್ಲಿ ಮೂಲಭೂತ ಒದಗಿಸಬೇಕು. ಮಕ್ಕಳ ಸುರಕ್ಷತೆಗಾಗಿ ಬೀಟ್ ಪೊಲೀಸ್ ಹಾಗೂ ಪೊಲೀಸ ಇಲಾಖೆಯಿಂದ ತೆರೆದ ಮನೆ ಕಾರ್ಯಕ್ರಮವು ಕಡ್ಡಾಯವಾಗಿ ನಡೆಸಲು ಸೂಚಿಸಿದರು. ಹೊಸ ಅಂಗನವಾಡಿ ಕಟ್ಟಡಗಳಿಗಾಗಿ ನಿವೇಶನವನ್ನು ಹುಡುಕಬೇಕು. ಅಪೌಷ್ಠಿಕ ಮಕ್ಕಳ ಬೆಳವಣಿಗೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ತಾಲೂಕುಗಳಲ್ಲಿ ಬಾಲ್ಯ ವಿವಾಹ, ಪೋಕ್ಸೋ ಹಾಗೂ ಮಕ್ಕಳ ಹಕ್ಕುಗಳ ಕುರಿತು ಅರಿವು ಮೂಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸೂಚಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಜಿ.ಎಸ್. ಗುಣಾರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭೀಮರಾವ ಕಣ್ಣೂರ, ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಹರಿ ದೇಶಪಾಂಡೆ, ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಎಲ್ಲಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಅಫಜಲಪುರ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸದಸ್ಯೆ ಡಾ. ಜಯಶ್ರೀ ಅವರು ಮಕ್ಕಳನ್ನು ಹಾಗೂ ತಾಯಂದಿಯರಿಗೆ ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ ಹಾಗೂ ಪೋಕ್ಸೋ ಕಾಯ್ದೆಯ ಕುರಿತು ವಿವರವಾದ ಮಾಹಿತಿ ನೀಡಿದರು. ನಂತರ ಸದಸ್ಯರು ಶರಣ ಸಿರಸಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳು, ಶಿಕ್ಷಣದ ಮಹತ್ವ ಮಕ್ಕಳ ಸುರಕ್ಷತೆ ಮುಂತಾದ ವಿಷಯಗಳ ಕುರಿತು ಮಾಹಿತಿ ನೀಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…