ಬಿಸಿ ಬಿಸಿ ಸುದ್ದಿ

ಒತ್ತಡ ರಹಿತ ಮನಸ್ಸು, ರೋಗ ರಹಿತ ದೇಹ: ಪೊಲೀಸ್ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಗಾರ

ಕಲಬುರಗಿ: ಇಂದಿನ ಒತ್ತಡ ಯುಗದಲ್ಲಿ ಮನಸ್ಸು ಮತ್ತು ದೇಹವನ್ನ ಆರೋಗ್ಯವಾಗಿಟ್ಟುಕೊಳ್ಳುವುದು ಮಹತ್ವದ ಜವಾಬ್ದಾರಿಯಾಗಿದೆ.ಅದರಲ್ಲೂ ಸಮಾಜದ ಸ್ವಾಸ್ಥ್ಯ ಕಾಪಾಡುವ ಪೊಲೀಸ್ ಸಿಬ್ಬಂದಿಗಳು ಒತ್ತಡ ರಹಿತ ಮನಸ್ಸು, ರೋಗ ರಹಿತ ದೇಹ ಹೊಂದುವುದು ಅವಶ್ಯಕವಾಗಿದೆ ಎಂದು ಕಲಬುರ್ಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮರ್ಬನ್ಯಾಂಗ್ ಅವರು ಹೇಳಿದರು.

ಜಿಲ್ಲಾ ಪೊಲೀಸ್ ಭವನದಲ್ಲಿಂದು ಇಲಾಖೆಯ ಅಧಿಕಾರಿ ಸಿಬ್ಬಂದಿಗಳಿಗಾಗಿ ಆಯೋಜಿಸಿದ್ದ ಒತ್ತಡ ರಹಿತ ಮನಸ್ಸು, ರೋಗ ರಹಿತ ದೇಹ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು,ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ತಮ್ಮ ಕಾರ್ಯದಲ್ಲಿ ಸದಾ ಒತ್ತಡವಿರುತ್ತದೆ.ಪೊಲೀಸ್ ಸಿಬ್ಬಂದಿಗಳು ವೃತ್ತಿಯಲ್ಲಿರುವಾಗಲೇ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮುಂಜಾಗ್ರತೆಯಿಂದ ಇರಬೇಕು.ಆರಕ್ಷಕರು ಸ್ವಸ್ಥವಾಗಿದ್ದರೆ ನಾಗರಿಕರು ಸುರಕ್ಷತೆಯಿಂದ ಇರಲು ಸಾಧ್ಯವಾಗುತ್ತದೆ.ದೇಹ ಆರೋಗ್ಯವಾಗಿದ್ದಾಗ ಮನಸ್ಸೂ ಸಹಿತ ಪ್ರಫುಲ್ಲವಾಗಿ ಉತ್ಸಾಹದಿಂದ ಕಾರ್ಯನಿರ್ವಹಿಸಲು ಪ್ರೇರೇಪಿಸುತ್ತದೆ.

ಇನ್ನು ಮುಂದೆ ಪ್ರತಿ ತಿಂಗಳು ಆಯಾ ತಾಲ್ಲೂಕಿನ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿ,ಅವರ ಮಕ್ಕಳಿಗೆ ಮತ್ತು ಕುಟುಂಬದವರಿಗಾಗಿ ಈ ರೀತಿಯ ವಿವಿಧ ಕ್ರಿಯಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.ಈ ನಿಟ್ಟಿನಲ್ಲಿ ಮೌನಯೋಗಿ ಫೌಂಡೇಶನ್ ಅಧ್ಯಕ್ಷ ಶ್ರಾವಣಯೋಗಿ ಹಿರೇಮಠ ಅವರು ವಿವಿಧ ಜಿಲ್ಲೆಗಳ ಪೊಲೀಸ್ ಇಲಾಖೆಯಲ್ಲಿ ಈ ರೀತಿಯ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಮತ್ತು ಮಾದರಿ ಎಂದರು.

ತರಬೇತಿ ಶಿಬಿರ ಕಾರ್ಯಾಗಾರ ನಡೆಸಿಕೊಟ್ಟ ಬೆಂಗಳೂರಿನ ಮನೋತಜ್ಞ,ಹ್ಯಾಪಿನೆಸ್ ಎಂಜಿನಿಯರ್ ಅವರು ಮಾತನಾಡಿ, ಮನಸ್ಸು ಮತ್ತು ದೇಹ ಒಂದು ನಾಣ್ಯದ ಎರಡು ಮುಖಗಳಿದ್ದ ಹಾಗೆ ಒಂದು ತೊಂದರೆಗೊಳಗಾದರೆ ಇನ್ನೊಂದು ಅನಾರೋಗ್ಯಕ್ಕೀಡಾಗುತ್ತದೆ. ಮನಸ್ಸು ಒತ್ತಡಕ್ಕೊಳಗಾದಾಗ ದೇಹ ಹಲವು ರೋಗಗಳಿಗೆ ತುತ್ತಾಗುವ ಅಪಾಯವಿದ್ದು ಈ ನಿಟ್ಟಿನಲ್ಲಿ ಈ ಒಂದು ಉಪಯುಕ್ತ ಕಾರ್ಯಾಗಾರವನ್ನು ಆಯೋಜಿಸಿದ್ದು ಬಹಳ ಸೂಕ್ತವಾಗಿದೆ.ಈ ನಿಟ್ಟಿನಲ್ಲಿ ಒತ್ತಡ ನಿರ್ವಹಣ ಶಾಸ್ತ್ರ ಹಾಗೂ ಒತ್ತಡದ ಬಗೆಗಿನ ತಪ್ಪು ಪರಿಕಲ್ಪನೆಗಳನ್ನು ಹೋಗಲಾಡಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದರು.

ಒತ್ತಡದ ಬಗೆಗಿನ ತಪ್ಪು ತಿಳುವಳಿಕೆಯಿಂದ ಬಹಳಷ್ಟು ಜನ ಹಾನಿಗೊಳಗಾಗಿದ್ದಾರೆ. ನಮ್ಮ ಭಾವನೆ ಹಾಗೂ ಮನೋಭಾವನೆ ಬದಲಾದರೆ ಒತ್ತಡ ನಿರ್ವಹಿಸುವುದು ಸುಲಭ ಎಂದು ಬೆಂಗಳೂರಿನಿಂದ ಆಗಮಿಸಿದ ತರಬೇತುದಾರ ಮನೋತಜ್ಞ ಭುಜಬಲಿ ಬೋಗಾರ ಕಾರ್ಯಾಗಾರ ನಡೆಸಿಕೊಟ್ಟು ವಿವಿಧ ಪ್ರಾಯೋಗಿಕ ತಂತ್ರಗಳನ್ನು ಹೇಳಿದರು .ಪೊಲೀಸ್ ಸಿಬ್ಬಂದಿಗಳು ತಮ್ಮ ಕಾರ್ಯಕ್ಷೇತ್ರದ ಒತ್ತಡವನ್ನು ಮನೆಗೆ ಕೊಂಡೊಯ್ಯಬಾರದು.ಕುಟುಂಬದ ತೊಂದರೆ ಒತ್ತಡಗಳನ್ನು ಕೆಲಸದಲ್ಲಿ ತರಬಾರದು.ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಪ್ರಸನ್ನ ದೇಸಾಯಿ,ಆರ್‌ಪಿಐ ಚನ್ನಬಸವ,ಶರಣಪ್ಪ ಮೌನಯೋಗಿ ಫೌಂಡೇಶನ್ ಅಧ್ಯಕ್ಷ ಶ್ರಾವಣಯೋಗಿ ಹಿರೇಮಠ ಇದ್ದರು. ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.ಪಿಎಸ್‌ಐ ಪಿ.ವಿ.ಸಾಲಿಮಠ ಕಾರ್ಯಕ್ರಮ ನಿರೂಪಿಸಿದರು.ಮಲ್ಲಮ್ಮ ಅವರು ಪ್ರಾರ್ಥನೆ ಗೀತೆ ಹಾಡಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

22 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago