ಚಿತ್ತಾಪುರ: ಜೀವ ರಕ್ಷಣೆಗೆ ಕಾರಣವಾಗುವ ರಕ್ತದಾನದಂತಹ ಮಹತ್ತರ ಕಾರ್ಯದಲ್ಲಿ ಭಾಗಿಯಾಗುವ ಸಾಮಾಜಿಕ ಕಾಳಜಿ ಬೆಳೆಸಿಕೊಳ್ಳಬೇಕು’ ಎಂದು ಕಾಲೇಜಿನ ಪ್ರಾಂಶುಪಾಲ ಡಾ, ವಿಜಯಕುಮಾರ್ ಸಾಲಿಮನಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪಟ್ಟಣದ ಆರ್.ಕೆ.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಹಾಗೂ ಸಂಶೋಧನ ಕೇಂದ್ರದ ಡಾ, ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ. ರಾಷ್ಟ್ರೀಯ ಸೇವಾ ಯೋಜನೆ ಎ ಮತ್ತು ಬಿ ಘಟಕಗಳು, ರೆಡ್ ರಿಬ್ಬನ್ ಕ್ಲಬ್ ಹಾಗೂ ರೆಡ್ ಕ್ರಾಸ್ ಘಟಕ ಸಂಯೋಗದಲ್ಲಿ ರಕ್ತದಾನದ ಮಹತ್ವ ಮತ್ತು ಏಡ್ಸ್ ಜಾಗೃತಿ ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ
ದೇಶದಲ್ಲಿ ಪ್ರತಿನಿತ್ಯ ಅಪಘಾತ ಪ್ರಕರಣಗಳಲ್ಲಿ ಸಾಕಷ್ಟು ಮಂದಿ ಮೃತಪಡುತ್ತಿದ್ದಾರೆ.
ಮನುಷ್ಯನಿಗೆ ಮನುಷ್ಯನ ರಕ್ತವನ್ನೇ ನೀಡಬೇಕು. ಆದರೆ, ಅನೇಕರಿಗೆ ರಕ್ತದಾನ ಮಾಡಲು ಆಸಕ್ತಿ ಇಲ್ಲ. ಲಕ್ಷಾಂತರ ಮಂದಿ ರಕ್ತಸ್ರಾವದಿಂದಾಗಿ ಜೀವ ಉಳಿಸಿಕೊಳ್ಳಲು ಜೀವನ್ಮರಣ ಹೋರಾಟ ನಡೆಸುತ್ತಾರೆ. ಇಂತಹ ಸಂದರ್ಭದಲ್ಲಿ ರಕ್ತದಾನ ಮಾಡಿ ಜೀವ ಉಳಿಸಬೇಕು ಎಂದು ಸಲಹೆ ನೀಡಿದರು.
ಮಹಿಳೆಯರು ಪ್ರಸವದ ಸಂದರ್ಭದಲ್ಲಿ ರಕ್ತಹೀನತೆಯಿಂದ ತೊಂದರೆಗೆ ಸಿಲುಕಿ ಮೃತಪಟ್ಟಿರುವ ನಿದರ್ಶನಗಳಿವೆ. ಇಂತಹವರಿಗೂ ನೀಡುವ ರಕ್ತವು ಜೀವ ದ್ರವ್ಯವಾಗಿ ಪ್ರಾಣ ಉಳಿಸುತ್ತದೆ. ರಕ್ತದಾನದಿಂದ ಆರೋಗ್ಯ ಸುಧಾರಿಸುತ್ತದೆ. ದೇಹದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ’ ಎಂದು ಹೇಳಿದರು.
ಇತ್ತೀಚಿನಇತ್ತೀಚಿನ ದಿನಗಳಲ್ಲಿ ರಕ್ತ ವಿಭಜಿಸಿ ಯಾವ ಅಂಶದ ಕೊರತೆ ಇದೆಯೋ ಅದನ್ನು ಮಾತ್ರ ರೋಗಿಗೆ ನೀಡುವ ತಂತ್ರಜ್ಞಾನ ಅಭಿವೃದ್ಧಿಯಾಗಿದೆ. ಇದರಿಂದ ರಕ್ತದ ಅಭಾವಕ್ಕೆ ಸ್ವಲ್ಪಮಟ್ಟಿಗೆ ಪರಿಹಾರ ಸಿಗುತ್ತಿದೆ. ಮಹಿಳೆಯರಲ್ಲಿ ಶೇ 80ರಷ್ಟು ಮಂದಿಗೆ ರಕ್ತಹೀನತೆ ಸಮಸ್ಯೆ ಕಾಡುತ್ತಿದೆ. ದಿನದಿಂದ ದಿನಕ್ಕೆ ರಕ್ತದ ಬೇಡಿಕೆ ಹೆಚ್ಚುತ್ತಿದೆ. ಆದರೆ, ಕೃತಕವಾಗಿ ರಕ್ತ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತದ ಕೊರತೆ ನೀಗಿಸುವ ನಿಟ್ಟಿನಲ್ಲಿ ರಕ್ತದಾನ ಶಿಬಿರಗಳ ಸಂಖ್ಯೆ ಹೆಚ್ಚಿಸಬೇಕು’ ಎಂದರು.
ಸಮಾಜಕ್ಕೆ ಮಾದರಿಯಾಗಿ: ‘ರಕ್ತದಾನದಿಂದ ಆರೋಗ್ಯದ ಮಾಹಿತಿ ಸಿಗುತ್ತದೆ, ರಕ್ತದ ಗುಂಪು ಯಾವುದೆಂದು ತಿಳಿಯುತ್ತದ. ವಿದ್ಯಾರ್ಥಿಗಳು ರಕ್ತದಾನದ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ರಕ್ತದಾನದಿಂದ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಎಂಬ ತಪ್ಪು ಕಲ್ಪನೆಯಿದೆ. ಆದರೆ, ರಕ್ತದಾನದಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ಹೀಗಾಗಿ ರಕ್ತದಾನ ಕುರಿತು ಭಯಪಡುವ ಅಗತ್ಯವಿಲ್ಲ. ಆರೋಗ್ಯವಂತ ವ್ಯಕ್ತಿ ವರ್ಷದಲ್ಲಿ 4 ಬಾರಿ ರಕ್ತದಾನ ಮಾಡಬಹುದು’ ಎಂದು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಡಾ ಆನಂದ್ ಚೌವ್ಹಾಣ ಹೇಳಿದರು.
ಈ ಸಂದರ್ಭದಲ್ಲಿ ಶ್ರೀಮತಿ ಸುಜ್ಞಾನಿ ಪಾಟೀಲ್, ಗುರುರಾಜ ಮುಗುಳಿ, ಡಾ, ಎಜಿ ಖಾನ್, ಡಾ ಪಂಡಿತ್ ಬಿಕೆ, ಡಾ ಎನ್ ಪರ್ವೀನ್ ಫಾತಿಮಾ, ಡಾ ಸಾವಿತ್ರಿ ಕುಲಕರ್ಣಿ, ಡಾ ವಿಶ್ವನಾಥ್ ಬೆಲ್ಲದ, ಡಾ ರಾಜಕುಮಾರ್ ಸಾಲಿ, ಡಾ ಶರಣಪ್ಪ ಸೈದಾಪುರ್, ಡಾ ಮಹೇಂದ್ರ ಪಟ್ಟಣಕರ್, ಸೇರಿದಂತೆ ಇತರರು ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…