ಕಲಬುರಗಿ: ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾದ ಮೈಸೂರಿನ ಕೇಂದ್ರಿಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಿಪೆಟ್ ಸಂಸ್ಥೆಯಲ್ಲಿ ೨೦೨೦-೨೧ನೇ ರ ಶೈಕ್ಷಣಿಕ ಸಾಲಿಗೆ ಡಿಪ್ಲೋಮಾ ಹಾಗೂ ಪೋಸ್ಟ್ ಗ್ರಾಜ್ಯುಯೆಟ್ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಹಾಗೂ ಮುಖ್ಯಸ್ಥರಾದ ಆರ್.ಟಿ. ನಾಗರಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂರು ವರ್ಷದ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿಪಿಟಿ), ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ) ಹಾಗೂ ಎರಡು ವರ್ಷದ ಪೋಸ್ಟ್ ಗ್ರಾಜ್ಯುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ ಪ್ರೊಸೆಸಿಂಗ್ ಮತ್ತು ಟೆಸ್ಟಿಂಗ್ (ಪಿಜಿಡಿ-ಪಿಪಿಟಿ) ಕೋರ್ಸ್‌ಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ (ವಿಜ್ಞಾನ) ಮತ್ತು ಬಿಎಸ್‌ಸಿ (ರಸಾಯನ) ಪರೀಕ್ಷೆಯಲ್ಲಿ ಉತ್ತೀರ್ಣರಾದ/ ಹಾಜರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ೨೦೨೦ರ ಮೇ ೨೨ ಕೊನೆಯ ದಿನವಾಗಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ http://eadmission.cipet.gov.in ವೆಬ್‌ಸೈಟ್‌ನ್ನು ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ 0821-2510618, ಮೊಬೈಲ್ ಸಂಖ್ಯೆ 9480253024, 9141075968 ಗಳಿಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
Diploma Automobile engineering
I feel good
Super