ಕಲಬುರಗಿ: ಕೇಂದ್ರ ಮತ್ತು ರಾಜ್ಯದಲ್ಲಿ ಬಹುಮತ ವಿರುವ ಬಿಜೆಪಿ ಸರಕಾರದ ಬಜೆಟ್ ವಿದ್ಯಾರ್ಥಿ ಯುವಜನ ಮತ್ತು ಶಿಕ್ಷಣ ವಿರೋಧಿ ಬಜೆಟ್ ಇದಾಗಿದೆ ಎಂದು ವಿದ್ಯಾರ್ಥಿ, ಹೋರಾಟಗಾರ, ಪತ್ರಿಕೋದ್ಯಮ ಸ್ನಾತಕೋತ್ತರ ವಿದ್ಯಾರ್ಥಿ ಭೀಮಾಶಂಕರ ಪಾಣೇಗಾಂವ್ ಎಂದು ಟೀಕಿಸಿದ್ದಾರೆ.
ಅದರಲ್ಲಿ ವಿಶೇಷ ಸ್ಥಾನಾಮಾನ ಹೊಂದಿರುವ ಈ ಪ್ರದೇಶಕ್ಕೆ ಕೆಲ ತಿಂಗಳ ಹಿಂದೆ ಹೆಸರಿಗೆ “ಕಲ್ಯಾಣ ಕರ್ನಾಟಕ ” ಅಂತ ಹೆಸರು ಘೋಷಿಸಿ ಸಮಾಧಾನಪಡಿಸಿ ತೊಗರಿಗೆ ಕನಿಷ್ಟ ಬೆಂಬಲ ಸಮರ್ಪಕ ಬೆಲೆ ನಿಗದಿಪಡಿಸದೇ ಹೆಚ್ಚಿನ ಬಜೆಟ್ ನೀಡದೆ ರೈತರಿಗೆ ಮತ್ತು ಈ ಭಾಗಕ್ಕೆ ಮಲತಾಯಿ ಧೋರಣೆ ಮಾಡಿ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಎಲ್ಲಾ ವಿದ್ಯಾರ್ಥಿ ಗಳಿಗೆ ಬೇಸರ ತರುವ ಹಾಗೂ ಯುವಜನರಿಗೆ ಹೆಚ್ಚಿನ ಉದ್ಯೋಗದ ಮಾತು ಪ್ರಸ್ತಾಪಿಸದೇ ನಿರಾಸೆ ಮೂಡಿಸಿದೆ. ಪ್ರಮುಖವಾಗಿ ಶಿಕ್ಷಣಕ್ಕೆ ಹೆಚ್ಚಿನ ಬಜೆಟ್ ನೀಡಿದ್ದು ತೃಪ್ತಿಕರ ಇಲ್ಲ.
ಬಂಡವಾಳಶಾಹಿಗಳಿಗೆ ಇಂಬು ನೀಡಿ ರಾಜ್ಯದ ಜನರಿಗೆ ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಯಿಂದ ಹೈರಾಣದಲ್ಲಿ ಬದುಕುತ್ತಿರುವ ಜನತೆಗೆ ಮತ್ತೊಮ್ಮೆ ಗಾಯದ ಮೇಲೆ ಬರೆ ಎಳೆದಿದ್ದಾರೆ.ಹಾಸ್ಟೆಲ್ ಮೂಲಸೌಕರ್ಯದ ಮಾತಿಲ್ಲ. ಮಹಿಳೆಯರ ಸಬಲೀಕರಣಕ್ಕೆ ಬೇಜವಾಬ್ದಾರಿ ತೋರಿದ್ದಾರೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಯೋಜನೆಯ ಕೊರತೆ ಬಜೆಟ್ ಯಾಗಿದೆ. ಒಟ್ಟಾರೆಯಾಗಿ ಈ ಸಲದ 2020 ರ ಬಜೆಟ್ ಆಟಕ್ಕುಂಟು ಲೆಕ್ಕಕಿಲ್ಲದಂತಾಗಿದೆ ಎಂದು ಹೇಳಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…