ಬಿಸಿ ಬಿಸಿ ಸುದ್ದಿ

ಗೋದುತಾಯಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ : ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಾ, ಪುರುಷರ ಸರಿಸಮಾನವಾಗಿ ಅವರಿಗೆ ಪ್ರತಿಸ್ಪರ್ಧಿಯಾಗಿ ಬೆಳೆಯುತ್ತಿದ್ದಾಳೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ನಿಕಟಪೂರ್ವ ಕುಲಪತಿಗಳಾದ ಪ್ರೊ. ಪರಿಮಳಾ ಅಂಬೇಕರ್ ತಿಳಿಸಿದರು.

ನಗರದ ಗೋದುತಾಯಿ ಕಾಲೇಜಿನಲ್ಲಿ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ, ಕಲಬುರಗಿ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮತ್ತು ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಅಧ್ಯಯನ ಕೇಂದ್ರದ ಅಡಿಯಲ್ಲಿ ಗುರುವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕುರಿತು ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಹಿಳೆಯರು ಕುಟುಂಬ ಕೆಲಸಗಳೊಂದಿಗೆ ಇಂದು ವಿಜ್ಞಾನಿ, ವೈದ್ಯ, ಪೈಲೆಟ್, ಶಿಕ್ಷಕಿ, ರಾಜಕಾರಣಿಯಾಗಿ ಹೀಗೆ ಅನೇಕ ಕ್ಷೇತ್ರಗಳಲ್ಲಿ ಹೆಜ್ಜೆ ಇಡುತ್ತಾ ಸಮಾಜ ಕಟ್ಟುವಲ್ಲಿ ಪುರಷರೊಂದಿಗೆ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಈ ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ಭ್ರೂಣ ಹತ್ಯೆ, ಬಾಲ್ಯ ವಿವಾಹ, ಲಿಂಗ ತಾರತಮ್ಯ ಸೇರಿದಂತೆ ಹಲವಾರು ಸಮಸ್ಯೆಗಳಿವೆ ಅವುಗಳನ್ನು ಹೋಗಲಾಡಿಬೇಕಾಗಿದೆ. ಸಮಾಜದಲ್ಲಿ ಯಾವುದೇ ತಾರತಮ್ಯ ಇರಕೂಡದು. ಇಂತಹ ಪ್ರಜಾಸತ್ತಾತ್ಮಕ ರಾಷ್ಟ್ರ ನಿರ್ಮಾಣವಾಗಬೇಕಾದರೆ, ಸಮಾಜದಲ್ಲಿರುವ ಎಲ್ಲಾ ರೀತಿಯ ಭೇದಭಾವಗಳು ತೊಲಗಬೇಕೆಂದು ಹೇಳಿದ ಅವರು , ಲಿಂಗತಾರತಮ್ಯ ಹೋಗುವವರೆಗೂ ನಮ್ಮ ದೇಶದಲ್ಲಿ ಮಹಿಳೆಯರ ಪರಿಸ್ಥಿತಿ ಸುಧಾರಿಸಲು ಸಾಧ್ಯವಿಲ್ಲ ಎಂದರು. ಕೇವಲ ಕಾನೂನುಗಳಿಂದ ಯಾವುದೇ ಸಮಸ್ಯೆಗಳು ಬಗೆಹರಿಯುವುದಿಲ್ಲ. ಸಮಾಜದ ಆಲೋಚನೆ ಬದಲಾಗಿ, ಮಹಿಳೆಯರು ಸಹ ಯಾರಿಗೂ ಕಡಿಮೆಯಿಲ್ಲ ಎಂಬ ಮನೋಭಾವ ಬಂದಾಗ ಮಾತ್ರ ಮಹಿಳೆಯರ ಮುಂದಿರುವ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಅವರು ಪ್ರತಿಪಾದಿಸಿದರು.

ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ ಮಾತನಾಡಿ, ಇಂದು ಮಹಿಳೆ ಸಬಲಳಾಗುತ್ತಿದ್ದಾಳೆ. ಅವಳಿಗೆ ಸರಿಯಾದ ಗೌರವ ಸಿಗುತ್ತಿಲ್ಲ. ಶರಣಬಸವೇಶ್ವರ ಸಂಸ್ಥಾನದಲ್ಲಿ ಮಹಿಳೆಯರಿಗೆ ಶಿಕ್ಷಣ ಮತ್ತು ಗೌರವವನ್ನು ಸಂಸ್ಥೆ ಮೊದಲಿನ ಕೊಡುತ್ತಾ ಬಂದಿದೆ. ಮೊದಲಿನಿಂದಲೂ ಮಹಿಳೆಯರಿಗಾಗಿಯೇ ಶಿಕ್ಷಣ ನೀಡುತ್ತಾ ಬಂದಿದ್ದು, ಅವರ ಶಿಕ್ಷಣಕ್ಕಾಗಿ ಇಂದಿನ ಪೀಠಾಧಿತಿಗಳಾದ ಪೂಜ್ಯ ಡಾ.ಅಪ್ಪಾಜೀಯವರು ಉನ್ನತ ಶಿಕ್ಷಣ ಸಂಸ್ಥೆಗಳನ್ನು ತೆರೆದು ಹಲವಾರು ಸೌಲಭ್ಯಗಳನ್ನು ಒದಗಿಸಿ ಶಿಕ್ಷಣ ನೀಡುತ್ತಿದ್ದಾರೆ. ಅದಕ್ಕಾಗಿ ಶರಣಬಸವೇಶ್ವರ ಸಂಸ್ಥೆಯಲ್ಲಿ ಕಲಿತ ಮಹಿಳೆಯರು ಜಗತ್ತಿನಾದ್ಯಂತ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣದ ಜತೆಗೆ ಸಮಾಜದಲ್ಲಿ ಬದುಕುವ ಕಲೆಯು ಈ ಸಂಸ್ಥೆ ನೀಡುತ್ತದೆ.
ಪುರುಷರಿಗಿಂತ ಮಹಿಳೆಯರು ಕೀಳು ಎಂಬುದು ಒಂದು ಮೌಢ್ಯವಾಗಿದೆ. ಹಲವು ಕ್ಷೇತ್ರಗಳಲ್ಲಿ ಮಹಿಳೆಯರು ಸಹ ಬೇಕಾದಷ್ಟನ್ನು ಸಾಧಿಸಿ ತೋರಿಸಿದ್ದಾರೆ. ಮಹಿಳೆಯರಿಗೆ ಅವಕಾಶ ಸಿಕ್ಕರೇ, ಪುರಷರಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ ಎಂಬುದನ್ನು ಸಾಧಿಸಿ ತೋರಿಸಲಿದ್ದಾರೆ ಎಂದರು.

ಮಹಾವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣಧಿಕಾರಿ ಡಾ.ಶಾಂತಲಾ ನಿಷ್ಠಿ, ಕ್ಷೇತ್ರ ಪ್ರಚಾರ ಅಧಿಕಾರಿಗಳಾದ ಶ್ರೀಮತಿ ಶೃತಿ ಎಸ್.ಟಿ., ಮಹಿಳಾ ಅಧ್ಯಯನ ಕೇಂದ್ರದ ಸಂಯೋಜಕಿ ಡಾ.ಸೀಮಾ ಪಾಟೀಲ ವೇದಿಕೆಯಲ್ಲಿದ್ದರು.
ಡಾ. ಸೀಮಾ ಪಾಟೀಲ ಸ್ವಾಗತಿಸಿದರು. ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಕ್ಷೇತ್ರ ಪ್ರಚಾರ ಅಧಿಕಾರಿಗಳಾದ ಶ್ರೀಮತಿ ಶೃತಿ ಎಸ್.ಟಿ. ಪ್ರಾಸ್ತಾವಿಕ ಮಾತನಾಡಿದರು. ಡಾ. ಪುಟ್ಟಮಣಿ ದೇವಿದಾಸ ನಿರೂಪಿಸಿದರು. ಶ್ರೀಮತಿ ಜಾನಕಿ ಹೊಸುರ ವಂದಿಸಿದರು. ಕು.ಭುವನೇಶ್ವರಿ ಮತ್ತು ಕು. ರಾಜೇಶ್ವರಿ ಪ್ರಾರ್ಥಿಸಿದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ನಡೆಸಿದ ಭಾಷಣ, ಕವನ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರದಲ್ಲಿ ಡಾ.ಸಿದ್ದಮ್ಮ ಗುಡೇದ್, ಡಾ.ಇಂದಿರಾ ಶೇಟಕಾರ, ಡಾ. ಎನ್.ಎಸ್.ಹೂಗಾರ, ಶ್ರೀಮತಿ ಸಾವಿತ್ರಿ ಜಂಬಲದಿನ್ನಿ, ರೇವಯ್ಯ ವಸ್ತ್ರದಮಠ, ಕೃಪಾಸಾಗರ ಗೊಬ್ಬುರ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago