ಬೆಂಗಳೂರು: ಕಲಬುರಗಿ, ಯಾದಗಿರಿ, ರಾಯಚೂರು ಭಾಗದ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ತಿಂತಿಣಿ ಬ್ರಿಡ್ಜ್ ಹತ್ತಿರ ಕೃಷ್ಣಾ ನದಿಗೆ ಜಲಾಶಯ ನಿರ್ಮಿಸಲು ಉದ್ದೇಶಿಸಿ, ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಕ್ರಮ ವಹಿಸುವ ಬಗ್ಗೆ ಮಾನ್ಯ ಬಿ.ಎಸ್ ಯಡಿಯೂರಪ್ಪನವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿದಂತಾಗುತ್ತದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.
ಮಾನ್ಯ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಿದ್ದು ಈ ಭಾಗದ ಅಭಿವೃದ್ಧಿಗೆ ಹೊಸ ನಾಂದಿ ಹಾಡಿದಂತಾಗಿದೆ. ಅಲ್ಲದೆ ಕಲ್ಯಾಣಕರ್ನಾಟಕ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಹಲವು ಬಾರಿ ವೈಯಕ್ತಿಕವಾಗಿ ಮತ್ತು ನಿಯೋಗದೊಂದಿಗೆ ಭೇಟಿ ಮಾಡಿದ್ದೆ. ೨೦೨೦-೨೧ನೇ ಸಾಲಿನಲ್ಲಿ ರೂ.೧೫೦೦.೦೦ ಕೋಟಿ ಅನುದಾನ ಘೋಷಣೆ ಮಾಡಿದ್ದು ನಿಜಕ್ಕು ಸಂತಸ ತಂದಿದೆ.
ಅಲ್ಲದೆ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವನ್ನು ಹೊಸದಾಗಿ ರಚಿಸಲಾಗಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಆರು ಜಿಲ್ಲೆಗಳಲ್ಲಿ ಕೃಷಿ, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಸ್ವಯಂ ಉದ್ಯೋಗ, ಯುವ ಸಬಲೀಕರಣ ಹಿಗೆ ಮುಂತಾದ ವಲಯಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿ ಈ ಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಈ ಚಟುವಟಿಕೆಗಳನ್ನು ಮುಂಬರುವ ವರ್ಷಗಳಲ್ಲಿ ೫೦೦ ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳುವ ಬಗ್ಗೆ ಬಜೆಟ್‌ನಲ್ಲಿ ತಿಳಿಸಲಾಗಿದೆ.
ಕಲ್ಯಾಣ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ ಮುಖ್ಯಮಂತ್ರಿಗಳಿಗೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಪ್ರಮುಖ ಅಂಶಗಳು
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…