ಬಿಸಿ ಬಿಸಿ ಸುದ್ದಿ

ಆರೋಗ್ಯ ನಿರೀಕ್ಷಕರಿಂದ ಕೊರೋನಾ ವೈರಸ್ ಹರಡದಂತೆ ಮುಂಜಾಗೃತ ಅಭಿಯಾನ

ಶಹಾಬಾದ: ನಗರದ ವಿವಿಧ ಹೊಟೇಲ್, ಬೇಕರಿ, ಬಾರ್, ಚಹಾ ಅಂಗಡಿ, ಖಾನಾವಳಿ ಹಾಗೂ ವೈನ್ ಶಾಪಾಗಳಿಗೆ ಗುರುವಾರ ನಗರಸಭೆಯ ಸಿಬ್ಬಂದಿ ವರ್ಗವದರು ತೆರಳಿ ಮುಂಜಾಗೃತ ಕ್ರಮವಾಗಿ ಕೊರೊನಾ ವೈರಸ್ ಹರಡದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಿದರು.

ಆರೋಗ್ಯ ನಿರೀಕ್ಷಕ ಶಿವರಾಜಕುಮಾರ ಜೆಟ್ಟೂರ್ ಮಾತನಾಡಿ, ಚೀನಾದಲ್ಲಿ ಮಹಾಮಾರಿ ಕೊರೊನಾ ವೈರಸ್‌ನಿಂದ ಈಗಾಗಲೇ ಅನೇಕ ಜನರ ಪ್ರಾಣ ತೆಗೆದುಕೊಂಡಿದೆ.ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುತ್ತಲಿದೆ.ಈಗ ಭಾರತಕ್ಕೂ ಲಗ್ಗೆ ಇಟ್ಟಿದೆ.ಈಗಾಗಲೇ ಬೀದರ್ ಜಿಲ್ಲೆಯಲ್ಲೂ ಒಬ್ಬ ವ್ಯಕ್ತಿಗೆ ಕೋರೋನಾ ವೈರಸ್ ಸೊಂಕು ತಗುಲಿರುವುದು ಕಂಡು ಬಂದಿದ್ದು, ಈ ರೋಗ ಹರಡದಂತೆ ರಾಜ್ಯ ಸರ್ಕಾರ ಸಾಕಷ್ಟು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೊಂದು ಸಾಂಕ್ರಾಮಿಕ ರೋಗವಾಗಿದ್ದು ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ.

ಸಂಕ್ರಮಿತ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದರಿಂದ ಆದಷ್ಟು ಸ್ವಚ್ಛತೆಯನ್ನು ಕಾಪಾಡುವುದು ಹೊಟೇಲ್, ಬಾರ್, ಖಾನಾವಳಿ ಇತರ ಅಂಗಡಿ ಮಾಲೀಕರ ಕರ್ತವ್ಯ .ಆದ್ದರಿಂದ ಆದಷ್ಟು ಗಾಜಿನ ಗ್ಲಾಸ್ ಬಳಸದೇ ಯುಸ್ ಅಂಡ್ ಥ್ರೋ ಪೇಪರ್ ಗ್ಲಾಸ್ ಹಾಗೂ ಪ್ಲೇಟ್ ಬಳಸಲು ಸೂಚಿಸಿದರು.ಆದಷ್ಟು ಮಾಸ್ಕಗಳನ್ನು ಬಳಸಿ.ಮೊಟ್ಟೆ , ಮಾಂಸದ ಆಹಾರವಿದ್ದರೇ ಚೆನ್ನಾಗಿ ಬೇಯಿಸಿ ನೀಡಿ. ನಿಮ್ಮ ಹತ್ತಿರ ಬರುವ ಗ್ರಾಹಕರಿಗೆ ಕೈ ತೊಳೆದುಕೊಳ್ಳಲು ಹ್ಯಾಂಡ್‌ವಾಶ್ ಬಳಸಲು ಹೇಳಿ. ಈ ರೀತಿ ಮಾಡುವುದರಿಂದ ಈ ರೋಗವನ್ನು ಆದಷ್ಟು ತಡೆಗಟ್ಟಬಹುದು.

ಇಲ್ಲದಿದ್ದರೇ ಈ ಮಹಾಮಾರಿ ಜನರಲ್ಲಿ ಆತಂಕ ಸ್ಥಿತಿ ಉಂಟು ಮಾಡುತ್ತದೆ.ಯಾರಿಗಾದರೂ ಕೆಮ್ಮು,ಸೀನು, ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡರೆ ಕೂಡಲೇ ಸಮೀಪದ ಆಸ್ಪತ್ರೆಗೆ ಬೇಟಿ ತಪಾಸಣೆಗೆ ಒಳಗಾಗಿ ಅಥವಾ ಬೇರೆಯವರಲ್ಲಿ ಲಕ್ಷಣಗಳು ಕಂಡುಬಂದರೂ ತಪಾಸಣೆಗೆ ಒಳಪಡಿಸಲು ಮುಂದಾಗಿ.ಈ ರೋಗವನ್ನು ತಡೆಗಟ್ಟಲು ಮೊದಲು ಸಾರ್ವಜನಿಕರ ಸಹಕಾರ ಮುಖ್ಯ ಎಂದರು.

ಈ ಸಂದರ್ಭದಲ್ಲಿ ಕಿರಿಯ ಆರೋಗ್ಯ ನಿರೀಕ್ಷಕ ಶರಣು, ರಾಜೇಶ, ಹುಣೇಶ, ಅನೀಲ ಸೇರಿದಂತೆ ನಗರಸಭೆಯ ಸಿಬ್ಬಂದಿ ವರ್ಗದವರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

19 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago