ಬಿಸಿ ಬಿಸಿ ಸುದ್ದಿ

ಸುರಪುರ: ಸಂಚಾರಿ ನಿಯಮ ಜಾಗೃತಿಗಾಗಿ ಕಿರು ಮ್ಯಾರಥಾನ್ ಶನಿವಾರ

ಸುರಪುರ: ಯಾದಗಿರಿ ಜಿಲ್ಲಾ ಪೋಲಿಸ್ ವತಿಯಿಂದ ಸಂಚಾರಿ ನಿಯಮಗಳ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಂಬರುವ ಶನಿವಾರ (ದಿನಾಂಕ ೦೭-೦೩-೨೦೨೦) ಬೆಳಿಗ್ಗೆ ೬:೩೦ಕ್ಕೆ ನಗರದಲ್ಲಿ ಮಿನಿ ಮ್ಯಾರಾಥಾನ್ ಹಮ್ಮಿಕೊಂಡಿರುವುದಾಗಿ ಯಾದಗಿರಿ ಜಿಲ್ಲಾ ಎಸ್ಪಿ ರುಷಿಕೇಶ ಭಗವಾನ್ ಸೋನೆವಾನೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು,ಶನಿವಾರ ಬೆಳಿಗೆಗ ೬:೩೦ಕ್ಕೆ ಸುರಪುರ ನಗರದ ತಿಮ್ಮಾಪುರ ಬಸ್ ನಿಲ್ದಾಣ ದಿಂದ ಮ್ಯಾರಥಾನ್ ಆರಂಭಗೊಳ್ಳಲಿದ್ದು ಸ್ಥಳಿಯ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಚಾಲನೆ ನೀಡಲಿದ್ದಾರೆ.ತಿಮ್ಮಾಪುರ ಬಸ್ ನಿಲ್ದಾಣದಿಂದ ಮರೆಗೆಮ್ಮ ಗುಡಿ,ಬಡೆ ಮಜೀದ್,ರಂಗಂಪೇಟೆ ಬಜಾರ್,ಅಂಬೇಡ್ಕರ್ ಚೌಕ್,ನಗರಸಭೆ ಕ್ರಾಸ್,ಗಾಂಧಿ ಚೌಕ್,ದರಬಾರ್ ರೋಡ್,ಮೂರ್ತಿ ಕಟ್ಟೆ,ಹನುಮಾನ್ ಟಾಕೀಸ್ ರೋಡ್ ಮಾರ್ಗವಾಗಿ ಸುರಪುರ ಪೋಲಿಸ್ ಠಾಣೆಗೆ ಬಂದು ಮುಕ್ತಾಯವಾಗಲಿದೆ.

ಈ ಮ್ಯಾರಥಾನ್‌ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವ ಹತ್ತು ಜನರಿಗೆ ಬಹುಮಾನ ನೀಡಲಾಗುತ್ತಿದ್ದು,ಹೆಚ್ಚಿನ ಸಂಖ್ಯೆಯಲ್ಲಿ ಯುವಕರು,ವಿದ್ಯಾರ್ಥಿಗಳು,ಸರ್ಕಾರಿ ನೌಕರರು ಮತ್ತು ಸಾರ್ವಜನಿಕರು ಭಾಗವಹಿಸುವಂತೆ ಅವರು ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

24 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago