ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಸುಮಾರು13 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ 3 ಗಂಟೆ ಸುಮಯಕ್ಕೆ ನಡೆದಿದೆ.
ಮೃತಪಟ್ಟವರನ್ನು ತಮಿಳುನಾಡು ಮೂಲದ ಮಂಜುನಾಥ್ (35), ತನುಜಾ (25), ಒಂದು ವರ್ಷದ ಹೆಣ್ಣು ಮಗು, ಗೌರಮ್ಮ (60), ರತ್ನಮ್ಮ (52), ರಾಜೇಂದ್ರ (27), ಸುಂದರ್ ರಾಜ್ (48), ಸರಳ (32), ಪ್ರಶನ್ಯಾ(14) ಎಂದು ಗುರುತಿಸಲಾಗಿದ್ದು, ಟವೇರಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಬೆಂಗಳೂರು ಮೂಲದ ಲಕ್ಷ್ಮೀಕಾಂತ್ (24), ಸಂದೀಪ್ (36), ಮಧು (28) ಮೃತಪಟ್ಟವರಲ್ಲಿ ಗುರುತಿಸಲಾಗಿದೆ. ಘಟನೆಯಲ್ಲಿ ಶ್ವೇತಾ, ಅರ್ಪಿತಾ, ಮಾಲಾಶ್ರೀ, ಗಂಗೋತ್ರಿ ಎಂಬುವವರು ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಪ್ರಕಾಶ್ ಎಂಬುವವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ನಾಲ್ವರು ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಸಾವನಪ್ಪಿರುವ ಘಟನೆ ನಡೆದಿದೆ. ಪಲ್ಟಿಯಾದ ಕಾರಿಗೆ ಎದುರಿನಿಂದ ವೇಗವಾಗಿ ಬಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಪರಿಣಾಮ ಎರಡೂ ಕಾರುಗಳಲ್ಲಿದ್ದ 13 ಮಂದಿ ದುರಂತ ಸಾವನ್ನಪ್ಪಿದ್ದಾರೆ.
ಧರ್ಮಸ್ಥಳದಿಂದ ವಾಪಸ್ ಬರುತ್ತಿದ್ದರು ಎನ್ನಲಾಗುತಿದ್ದ, ತಮಿಳುನಾಡು ಮೂಲದ ಕಾರು ವೇಗವಾಗಿ ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಇಂದು ಮುಂಜಾನೆ 3 ಗಂಟೆ ಸಮಯದಲ್ಲಿ ಸಂಭವಿಸಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…