ಬಿಸಿ ಬಿಸಿ ಸುದ್ದಿ

ಬಾಲಕಿಯರು ಪ್ರಬುದ್ಧರಾಗಬೇಕು: ಡಾ.ಶಕುಂತಲಾ ಬನಾಳೆ

ಕಲಬುರಗಿ: ಹುಡುಗಿಯರು(ಬಾಲಕಿಯರು) ತಮ್ಮ ಶರೀರದಲ್ಲಾಗುವ ಬದಲಾವಣೆಯ ಬಗ್ಗೆ ಗಮನ ವಹಿಸಬೇಕು. ಅವರಲ್ಲಾಗುವ ದೈಹಿಕ ಮತ್ತು ಮಾನಸಿಕ ಬದಲಾವಣೆಯನ್ನು ಅರಿವುವಷ್ಟು ಪ್ರಬುದ್ಧರಾಗಬೇಕು ಎಂದು ಖ್ಯಾತ ಸ್ತ್ರೀ ರೋಗ ತಜ್ಞರಾದ ಡಾ.ಶಕುಂತಲಾ ಬನಾಳೆ ಅಭಿಪ್ರಾಯ ಪಟ್ಟರು.

ನಗರದ ಶರಣಬಸವ ವಿಶ್ವವಿದ್ಯಾಲಯದ ಆವರಣದ ದೊಡ್ಡಪ್ಪ ಅಪ್ಪಾ ಸಭಾ ಮಂಟಪದಲ್ಲಿ ವಿಶ್ವ ಮಹಿಳಾ ದಿನದ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಮಹಿಳಾ ಆರೋಗ್ಯ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯ ಆರೋಗ್ಯದಲ್ಲಾಗುವ ಋತುಚಕ್ರದ ಬದಲಾವಣೆ ಹಾಗೂ ಕಾರಣಗಳನ್ನು ತಿಳಿಸಿದರು. ಬಿಳಿಮುಟ್ಟುವಿನಿಂದಾಗುವ ತೊಂದರೆಗಳು ಹಾಗೂ ಮುಂತಾದ ವಿಷಯಗಳ ಬಗ್ಗೆ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಹುಡುಗಿಯರು ಮುಂದೆ ಮದುವೆ ಆದ ಮೇಲೆ ಒಂದು ಮಗುವಿಗೆ ಜನ್ಮ ನೀಡುವರು. ಹೀಗಾಗಿ ಪೌಷ್ಠಿಕಾಂಶ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು. ನಿಮ್ಮ ಆಧುನಿಕ ಜೀವನ ಶೈಲಿಯಿಂದ ನಿಮ್ಮ ಆರೋಗ್ಯ ಹಾನಿ ಮಾಡಿಕೊಳ್ಳಬೇಡಿ ಎಂದು ಎಂಆರ್‌ಐ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಮಧುರಾ ಬನಾಳೆ ಸಲಹೆ ನೀಡಿದರು.

ದಿನಕ್ರಮೇಣ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹಾಗೂ ಗರ್ಭಕೋಶದ ಕ್ಯಾನ್ಸರ್ ಹೆಚ್ಚಾಗುತ್ತಿವೆ. ಸ್ತನ ಕ್ಯಾನ್ಸರಗೆ ವಯಸ್ಸಿನ ಮಿತಿಯಿಲ್ಲ. ಹೀಗಾಗಿ ಬಾಲಕಿಯರು ಆರೋಗ್ಯ ಬಗ್ಗೆ ಜಾಗೃತಿ ವಹಿಸಬೇಕು. ಕಬ್ಬಿಣಾಂಶ ಹಾಗೂ ಪೌಷ್ಠಿಕಾಂಶದ ಆಹಾರವನ್ನು ಹೆಚ್ಚಿನ ರೀತಿಯಲ್ಲಿ ಸೇವಿಸಿ ಎಂದರು. ಖ್ಯಾತ ವೈದ್ಯೆ ಡಾ. ಶರಣಮ್ಮ ಬಿರಾದಾರ ಮಾತನಾಡಿ, ಪ್ರತಿ ಮಹಿಳೆ ಜೀವನದಲ್ಲಿ ಐದು ಹಂತಗಳನ್ನು ತಲಪುತ್ತಾಳೆ. ಮೊದಲು ಶೈಶ್ಯಾವಸ್ಥೆ, ಬಾಲ್ಯಾವಸ್ಥೆ, ಯೌವನಾವಸ್ಥೆ, ವಯಸ್ಕ ಹಾಗೂ ವೃದ್ಯಾಪ್ಯಾ ಹಂತಗಳನ್ನು ದಾಟುತ್ತಾಳೆ. ಸದೃಢ ಭಾರತಕ್ಕೆ ಸದೃಢ ಯುವತಿಯರ ಅವಶ್ಯವಿದೆ ಎಂದರು.

ಪ್ರೊ. ನಿಖತ್ ನಿರೂಪಿಸಿದರು. ವಿದ್ಯಾರ್ಥಿನಿ ಪ್ರಿಯಾಂಕಾ ನಿಂಬಾಳೆ ಪ್ರಾರ್ಥನೆ ಗೀತೆ ಹಾಡಿದರು. ಪ್ರೊ. ಭಾಗ್ಯಲಕ್ಷ್ಮಿ ವಂದಿಸಿದರು. ವಿವಿ ಕುಲಸಚಿವ ಡಾ. ಅನೀಲಕುಮಾರ ಬಿಡವೆ, ವಿವಿ ಡೀನ್ ಡಾ. ಲಕ್ಮಿ ಮಾಕಾ, ಡಾ. ಶಶಿಕಲಾ, ಡಾ. ವಾಣಿಶ್ರೀ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

17 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

17 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago