ಸುರಪುರ: ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಸದಾಶಿವ ಆಯೋಗದ ವರದಿ ಜಾರಿಗೆ ಬರುತ್ತಿಲ್ಲ,ಕಳೆದ ೨೦ ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದೇವೆಆದರೂ ಸರಕಾರಗಳು ನಮ್ಮ ಬೇಡಿಕೆಈಡೇರಿಸುತ್ತಿಲ್ಲಎಂದು ಮಾದಿಗದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯತಾಲ್ಲೂಕುಅಧ್ಯಕ್ಷದುರ್ಗಪ್ಪ ನಾಗರಾಳ ಬೇಸರ ವ್ಯಕ್ತಪಡಿಸಿದರು.
ನ್ಯಾಯಮೂರ್ತಿಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲುಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾರ್ಚ್೧೧ ರಂದುಹಮ್ಮಿಕೊಂಡಿರುವ ಚಳವಳಿಯ ಕರಪತ್ರಗಳನ್ನು ಟೇಲರ್ ಮಂಜಿಲ್‌ದಲ್ಲಿ ಶುಕ್ರವಾರ ಬಿಡುಗಡೆ ಮಾಡಿ ಮಾತನಾಡಿ,ವರದಿ ಜಾರಿ ಮಾಡುವಂತೆರಾಜ್ಯ ಸರ್ಕಾರಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕಾಗುತ್ತದೆ.ಇದುವರೆಗೂರಾಜ್ಯ ಸರ್ಕಾರಗಳು ಈ ಬಗ್ಗೆ ಆಸಕ್ತಿ ವಹಿಸಿಲ್ಲ. ಇದನ್ನು ಖಂಡಿಸಿ ಮತ್ತು ಶಿಫಾರಸ್ಸು ಮಾಡುವಂತೆ ಆಗ್ರಹಿಸಿ ಮಾರ್ಚ್ ೧೧ ರಂದು ಬೆಂಗಳೂರಿನಲ್ಲಿ ವಿಧಾನಸೌಧ ಮುತ್ತಿಗೆ ಚಳವಳಿ ನಡೆಸುವುದಾಗಿ ತಿಳಿಸಿದರು.
ಚಳವಳಿಯಲ್ಲಿ ಸಮಿತಿಯರಾಷ್ಟ್ರೀಯಅಧ್ಯಕ್ಷ ಮಂದಾಕೃಷ್ಣ ಮಾದಿಗ, ರಾಜ್ಯಘಟಕದಅಧ್ಯಕ್ಷ ಬಿ.ನರಸಪ್ಪ ನೇತೃತ್ವ ವಹಿಸುವರು.ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರಜನ ಸಮೂದಾಯ ಬಾಂಧವರು ಭಾಗವಹಿಸುವರು. ತಾಲ್ಲೂಕಿನಿಂದಒಂದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆಎಂದರು.
ಸುರೇಶಅಮ್ಮಾಪುರ, ಚಂದ್ರಕಾಂತ ದೀವಳಗುಡ್ಡ, ದುರ್ಗೇಶಗೋಗಿಕರ್, ಭೀಮಣ್ಣರುಕ್ಮಾಪುರ, ಹುಸೇನಪ್ಪರುಕ್ಮಾಪುರ, ರಾಕೇಶರುಕ್ಕುಂಪೇಟ, ಪರಶುರಾಮ ದೀವಳಗುಡ್ಡ, ಹಣಮಂತದೊಡ್ಡಮನಿ, ಲಕ್ಷ್ಮಣರಾಯಚೂರಕರ, ಬಸವರಾಜಚಿಗರಿಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…