ಬಿಸಿ ಬಿಸಿ ಸುದ್ದಿ

ಶರಣಬಸವ ವಿಶ್ವವಿದ್ಯಾಲಯದಲ್ಲಿ ಯೋಜನೆ ಪ್ರದರ್ಶನ ಕಾರ್ಯಕ್ರಮ

ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯದ ಆವರಣದಲ್ಲಿ ವಿಶ್ವ ಮಹಿಳಾ ದಿನದ ಅಂಗವಾಗಿ ಎಲೆಕ್ಟ್ರಾನಿಕ್ ವಿಭಾಗ ಶನಿವಾರ ಬೆಳಗ್ಗೆ ೧೦ ಗಂಟೆಗೆ ಏರ್ಪಡಿಸಿದ ಯೋಜನೆ ಪ್ರದರ್ಶನ ಕಾರ್ಯಕ್ರಮವನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.

ಪ್ರದರ್ಶನದಲ್ಲಿ ಶರಣಬಸವ ವಿವಿಯ ಎಮ್.ಎಸ್‌ಸಿ, ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಮತ್ತು ಕಲಾ ವಿಭಾಗ ಸೇರಿದಂತೆ ವಿವಿಧ ವಿಭಾಗದ ವಿದ್ಯಾರ್ಥಿಗಳು ಸಿದ್ದಪಡಿಸಿದ ವಿಜ್ಞಾನ, ತಂತ್ರಜ್ಞಾನ, ಗಣಿತ, ಕಲೆ, ಶಿಲ್ಪಕಲೆ, ಮತ್ತು ಇನ್ನಿತರ ಯೋಜನೆಗಳನ್ನು ವೀಕ್ಷಿಸಿ ಅವುಗಳ ಕುರಿತು ಮಾಹಿತಿ ಪಡೆದರು. ಒಟ್ಟು ೨೬ ತಂಡಗಳು ಪ್ರದರ್ಶನದಲ್ಲಿ ಭಾಗವಹಿಸಿ ನೋಡುಗರ ಗಮನ ಸೆಳೆದವು, ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಈ ಸಂಧರ್ಬದಲ್ಲಿ ಎಮ.ಸಿ.ಎ ವಿಭಾಗದ ಡೀನ ಕಿರಣ ಮಾಕಾ , ಪ್ರೊ. ಶಿವಗಂಗಾ ಪಾಟೀಲ ಸೇರಿದಂತೆ ವಿವಿಧ ವಿಭಾಗದ ಮುಖ್ಯಸ್ಥರು ಹಾಜರಿದ್ದರು.

ಇದೇ ವೇಳೆ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಕಟ್ಟಡದಲ್ಲಿ ಏರ್ಪಡಿಸಿದ ರಂಗೋಲಿ ಸ್ಫರ್ಧೆಯಲ್ಲಿ ಸುಮಾರು ೬೪ ವಿದ್ಯಾರ್ಥಿನಿಯರು ಪಾಲ್ಗೊಂಡು, ’ಸೇವ್ ದಿ ಗರ್ಲ್’, ’ವುಮೇನ್ ರೈಟ್ಸ್ ಆರ್ ಹ್ಯುಮನ್ ರೈಟ್ಸ್’, ’ಬೇಟಿ ಬಚಾವೋ ಬೇಟಿ ಪಡಾವೋ’, ಎಂಬ ಅಡಿಬರಹಗಳು ಆಕರ್ಷಣಿಯವಾಗಿದ್ದವು. ಎಮ್.ಎಸ್‌ಸಿ ವಿಭಾಗದ ವಿದ್ಯಾರ್ಥಿನಿ ಪ್ರೀತಿ ಪ್ರಥಮ ಸ್ಥಾನ ಪಡೆದರೆ ಇನ್ನುಳಿದ ಸ್ಥಾನಗಳನ್ನು ಎಮ್.ಕಾಂನ ರಾಗಿಣಿ, ಹಾಗೂ ಗಣಿತ ಸಂಶೋಧನಾ ವಿದ್ಯಾರ್ಥಿನಿ ಅಶ್ವಿನಿ ಪಡೆದುಕೊಂಡರು.

ವಿವಿಯ ಹಲವಾರು ವಿಭಾಗದಲ್ಲಿ ಪೇಪರ್ ಪ್ರೆಜೆಂಟೇಷನ್, ಚರ್ಚಾ ಸ್ಪರ್ಧೆ, ಕ್ವಿಜ್, ಪೇಂಟಿಂಗ ಮತ್ತು ಛಾಯಾಚಿತ್ರ ಸೇರಿ ಅನೇಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣ ಮಾಡಿದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

6 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

8 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

13 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

17 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

18 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

40 mins ago