ಸುರಪುರ: ಕರೋನೊ ವೈರಸ್‌ಗೆ ಸಾರ್ವಜನಿಕರು ಯಾವುದೆ ರೀತಿಯ ಭಯಪಡುವುದು ಬೇಡ ಈ ಸೊಂಕಿತರ ಆರೈಕೆಮಾಡಲು ನಮ್ಮ ಸರ್ಕಾರಗಳು ಮತ್ತು ವೈದ್ಯರು ಸರ್ಮಥರಾಗಿದ್ದು ಸಾರ್ವಜನಿಕರು ಯಾವುದೆ ರೀತಿಯ ಚಿಂತೆಗೀಡಾಗಬಾರದು ಹಾಗೆ ವೈದ್ಯರೂ ಕೋಡಾ ಇತಂಹ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿ ರೋಗಿಗಳನ್ನು ತುರ್ತಾಗಿ ಚಿಕಿತ್ಸೆಗೊಳಪಡಿಸಿ ಎಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ಸೂಚಿಸಿದ್ದಾರೆ.
ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಶನಿವಾರ ಭೇಟಿನೀಡಿ ಕೊರೋನೊ ವೈರಸ್ ತಗುಲಿದ ರೋಗಿಗಳ ಚಿಕಿತ್ಸೆಗಾಗಿ ನಿರ್ಮಿಸಿರುವ ವಿಶೇಷ ಘಟಕವನ್ನು ವಿಕ್ಷಿಸಿ ನಂತರ ಕರೊನಾ ಜಾಗೃತಿ ಕುರಿತಾದ ಭಿತ್ತಿ ಪತ್ರ ಬಿಡುಗಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಅವರು ನಮ್ಮ ತಾಲೂಕಿನ ಜನ ವ್ಯಾಪಾರ ವಹಿವಾಟಿಗಾಗಿ ಹೈದ್ರಾಬಾದ ಮತ್ತು ಬೆಂಗಳೂ ರು ಪ್ರದೇಶಗಳಲ್ಲಿ ತಿರುಗಾಡುವುದು ಜಾಸ್ತಿ ಹೀಗಾಗಿ ಮುಂಜಾಗೃತಾ ಕ್ರಮವಾಗಿ ನಮ್ಮ ವೈದ್ಯರು ಈ ವಿಶೇಷಘಟಕವನ್ನು ತೆರೆದಿದ್ದಾರೆ ಸಾರ್ವಜನಿಕರಿಗೆ ಈ ರೋಗದ ಗುಣ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೆ ಸಾರ್ವಜನಿಕ ಆಸ್ಪತ್ರಗೆ ಬಂದು ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆಯಿರಿ ಎಂದು ತಿಳಿಸಿದರು.
ಈ ಸಮಯದಲ್ಲಿ ಜಿಪಂ ಮಾಜಿ ಅಧ್ಯಕ್ಷ ರಾಜಾ ಹಣಮಪ್ಪನಾಯಕ ತಾತಾ, ತಾಲೂಕು ವೈದ್ಯಾಧಿಕಾರಿ ಡಾ. ಆರ್.ವಿ.ನಾಯಕ, ಡಾ.ಹರ್ಷವರ್ಧನ ನಾಯಕ, ಕೃಷ್ಣಾ ರೆಡ್ಡಿ ಮೂದ್ನೂರು, ಮಲ್ಲಿಕಾರ್ಜುನ ರೆಡ್ಡಿ ಅಮ್ಮಾಪುರ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…