ಕಲಬುರಗಿ: ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿ.ಟಿ.ಯು) ಪಿಜಿ ಸೆಂಟರ್ ಹಾಗೂ ಪ್ರಾದೇಶಿಕ ಕಚೇರಿಯಲ್ಲಿ “ಐ.ಎಸ್.ಟಿ.ಇ.ವಿದ್ಯಾರ್ಥಿಗಳ ಅಧ್ಯಾಯ” ದಡಿಯಲ್ಲಿ “ಮಹಿಳಾ ಸಬಲೀಕರಣ” ವಿಷಯದ ಕುರಿತು ಆಯೋಜಿಸಲಾಗಿದ್ದ ಕಾರ್ಯಾಗಾರವನ್ನು “ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್, ನವದೆಹಲಿ (ISTE, New Delhi) ಯ ಅಧ್ಯಕ್ಷರಾದ ಡಾ.ಪ್ರತಾಪ್ ಸಿನ್ಹಾ ದೇಸಾಯಿ ಉದ್ಘಾಟಿಸಿ ಮಾತನಾಡಿದರು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ನಗರದ ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಹಾಗೂ ದೂರಸಂಪರ್ಕ ವಿಭಾಗದ ಪ್ರಾಧ್ಯಾಪಕಿ ಡಾ.ಗೀತಾ ಪಾಟೀಲ,ಗೌರವ ಅತಿಥಿಗಳಾಗಿ ನಗರದ ಶೆಟ್ಟಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಅಶೋಕ ವನಕೇರಿ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್, ನವದೆಹಲಿಯ ಕಾರ್ಯಕಾರಿ ಮಂಡಳಿ ಸದಸ್ಯರಾದ ಡಾ.ಎಸ್.ಜಿ.ಮಲಶೆಟ್ಟಿ ಅವರು ವೇದಿಕೆಯಲ್ಲಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿ.ಟಿ.ಯು) ಪಿಜಿ ಸೆಂಟರ್ ಹಾಗೂ ಪ್ರಾದೇಶಿಕ ಕಚೇರಿಯ ನಿರ್ದೇಶಕ ಡಾ.ಬಸವರಾಜ ಗಾದಗೆ ವಹಿಸಿದ್ದರು. ಪ್ರಾಧ್ಯಾಪಕಿ ಡಾ. ಶುಭಾಂಗಿ ಡಿ.ಸಿ. ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. “ಸೈಬರ್‌ಸ್ಪೇಸ್ ನಲ್ಲಿ ಮಹಿಳೆ” ವಿಷಯದ ಬಗ್ಗೆ ಡಾ.ಗೀತಾ ಪಾಟೀಲ ವಿಶೇಷ ಉಪನ್ಯಾಸ ನೀಡಿದರು. ಪಿಜಿ ಸೆಂಟರ್ ಹಾಗೂ ಪ್ರಾದೇಶಿಕ ಕಚೇರಿಯ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.