ಕಲಬುರಗಿ: ನಗರದ ಗೇಸುದರಾಜ್ ಕಾಲೋನಿಯ ಜವಾರೆಹಿಂದ್ ಶಾಲೆ ಹತ್ತಿರ ವ್ಯಕ್ತಿ ಓರ್ವನನ್ನು ಕೊಲೆ ಮಾಡಿರುವ ಘಟನೆ ಇಂದು ಸಂಜೆ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಜಾವಾರೆಹಿಂದ್ ನಿವಾಸಿ ಅಕ್ರಮ್ (28) ಕೊಲೆಯಾದ ದುರ್ದೈವಿ, ಅಕ್ರಮ್ ಪ್ರೋಫೆಷನಲ್ ಫರ್ನಿಚರ್ ಎಂಬ ಅಂಗಡಿಯಲ್ಲಿ ಕಾರ್ಪೆಂಟರ್ ಕೆಲಸ ಮಾಡುತಿದ್ದು, ಇಂದು ಸಂಜೆ ಸುಮಾರ 5.30ಕ್ಕೆ ಕೆಲವರು ಬೈಕ್ ಮೇಲೆ ಅಕ್ರಮ್ ಮನೆಗೆ ಆಗಮಿಸಿ ಕ್ರಿಕೆಟ್ ಸ್ಟೆಂಪ್ ಹಾಗೂ ತೆಲೆಗೆ ದೊಣ್ಣೆಯಿಂದ ಹೊಡೆದ್ದು, ನಂತರ ಮಾರಾಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪಿ.ಎಸ್.ಐ ಅಸ್ಲಮ್ ಬಾಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದು, ಹಳೆ ವೈಷ್ಯಮ್ಯದ ಹಿನ್ನೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಕೊಲೆ ನಂತರ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಸಾರ್ವಜನಿಕರು ಭಾರಿ ಸಂಖ್ಯೆಯಲ್ಲಿ ಜಾಮಾಯಿಸಿದ್ದು, ಬಡವಾಣೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…