ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಯಾನಗುಂದಿಯ ಮಾತೇ ಮಾಣಿಕ್ಯೇಶ್ವರಿ ಅವರು, ಲಿಂಗಕ್ಯರಾಗಿದ್ದು, ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮಾತೆ ಮಾಣಿಕ್ಯೇಶ್ವರಿ ಅವರು ನಡೆದಾಡುವ ದೇವರೆಂದೇ ಖ್ಯಾತಿಯಾಗಿದ್ದರು. ಮಹಾಯೋಗಿನಿ ಎಂದು ಹೆಸರುವಾಸಿಯಾಗಿದ್ದರು. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಅಪಾರ ಸಂಖ್ಯೆಯ ಭಕ್ತ ಸಮೂಹವನ್ನು ಹೊಂದಿದ್ದಾರೆ.
ಪ್ರತಿ ಶಿವರಾತ್ರಿಯಂದು ವಿಶೇಷ ಸಂದೇಶ ನೀಡುತ್ತಿದ್ದರು. ಸಮಾಜದ ಏಳಿಗಾಗಿ, ಭಕ್ತರ ಸಂಕಷ್ಟಗಳ ನಿವಾರಣೆಗಾಗಿ ಅಪಾರವಾಗಿ ಶ್ರಮಿಸುತ್ತಿದ್ದರು. ಆದ್ಯಾತ್ಮ, ಶಿಕ್ಷಣ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ.
ಅವರ ಅಗಲಿಕೆಯಿಂದ ಈ ನಾಲ್ಕು ರಾಜ್ಯಗಳಲ್ಲಿ ಲಕ್ಷಾಂತರ ಭಕ್ತ ಸಮೂಹವು ದುಃಖದ ಮಡುವಿನಲ್ಲಿದ್ದು, ತುಂಬಲಾರದ ನಷ್ಟ ಉಂಟಾಗಿದೆ. ನಾಲ್ಕೂ ರಾಜ್ಯಗಳ ಭಕ್ತ ಸಮೂಹಕ್ಕೆ , ಅನುಯಾಯಿಗಳಿಗೆ ಮಾತೆಯವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತಲ್ಲಿ ಪ್ರಾರ್ಥಿಸುವುದಾಗಿ ಡಿಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…