ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗ ಸೇರಿದಂತೆ ಕರ್ನಾಟಕ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಅಪಾರ ಭಕ್ತ ಸಮೂಹವನ್ನು ಹೊಂದಿದ್ದ ಮಾತಾ ಮಾಣಿಕೇಶ್ವರಿ ಅವರು ಲಿಂಗೈಕ್ಯರಾಗಿದ್ದರಿಂದ ಈ ಭಾಗ ಆಧ್ಯಾತ್ಮದ ಮೇರು ಪರ್ವತವನ್ನು ಕಳೆದುಕೊಂಡಂತಾಗಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಮ್ಮನವರ ನಿಧನದಿಂದ ಸಮಾಜಕ್ಕೆ ಅಪಾರ ನಷ್ಟವುಂಟಾಗಿದೆ ಎಂದು ಸಂತಾಪ ಸಂದೇಶದಲ್ಲಿ ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ತಿಳಿಸಿದ್ದಾರೆ.