ಬಿಸಿ ಬಿಸಿ ಸುದ್ದಿ

ಪತ್ರಕರ್ತರ ಮುಂದಿನ ರಾಜ್ಯ ಸಮ್ಮೇಳನ ಕಲಬುರಗಿಗೆ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 36ನೇ ರಾಜ್ಯ ಸಮ್ಮೇಳನ ಅವಕಾಶ ಪ್ರಪ್ರಥಮ ಬಾರಿಗೆ ಕಲಬುರಗಿಗೆ ದೊರಕಿದೆ.

ಮಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಸಮ್ಮೇಳನದ ಪ್ರತಿನಿಧಿಗಳ ಸಮ್ಮೇಳನದಲ್ಲಿ ಮುಂದಿನ ಸಲ ಕಲಬುರಗಿಯಲ್ಲಿ ನಡೆಸುವ ಕುರಿತಾಗಿ ನಿರ್ಣಯ ಕೈಗೊಳ್ಳಲಾಯಿತು. ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಕಲಬುಯಲ್ಲಿ ಸಮ್ಮೇಳನ ನಡೆಸುವ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿನಿಧಿಗಳೆಲ್ಲರೂ ಚಪ್ಪಾಳೆ ತಟ್ಟುವ ಮೂಲಕ ನಿರ್ಣಯಕ್ಕೆ ಬೆಂಬಲಿಸಿದರು.

ಪ್ರಥಮ ಬಾರಿಗೆ ಸಮ್ಮೇಳನ ಕಲಬುರಗಿ ಗೆ ದೊರಕಿದ್ದಕ್ಕೆ ಸಮಾವೇಶದಲ್ಲಿ ಉಪಸ್ಥಿತರಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾದ ಭವಾನಿಸಿಂಗ್ ಠಾಕೂರ, ರಾಜ್ಯ ಸಮಿತಿ ಸದಸ್ಯರಾದ ದೇವೆಂದ್ರಪ್ಪ ಕಪನೂರ, ಹಣಮಂತರಾವ್ ಭೈರಾಮಡಗಿ, ಜಿಲ್ಲಾ ಘಟಕದ ಕೋಶಾಧ್ಯಕ್ಷ ರಾಜು ದೇಶಮುಖ, ಉಪಾಧ್ಯಕ್ಷರಾದ ಸುರೇಶ ಸಿಂಧ್ಯ, ಗುರುಬಸಪ್ಪ ಸಜ್ಜನಶೆಟ್ಟಿ, ಸದಸ್ಯ ಸಂಗಮನಾಥ ರೇವತಗಾಂವ, ಮಲ್ಲಿಕಾರ್ಜುನ ಜೋಗ, ಮಹ್ಮದ ಮುಜೀಬ್ ಅಲಿಖಾನ್ ಮುಂತಾದವರು ಹರ್ಷ ವ್ಯಕ್ತಪಡಿಸಿದರು. ಎಲ್ಲರ ಸಹಕಾರದೊಂದಿಗೆ ಕಲಬುರಗಿಯಲ್ಲೂ ಸಮ್ಮೇಳನ ಯಶಸ್ವಿಯಾಗಿ ನೆರವೇರಿಸುವುದಾಗಿ ಭರವಸೆ ನೀಡಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago