ಕಲಬುರಗಿ: ಕಲ್ಯಾಣ ಕರ್ನಾಟಕದ ನಡೆದಾಡುವ ದೇವರೆಂದೆ ಪ್ರಸಿದ್ಧರಾಗಿದ್ದ, ಯಾನಾಗುಂದಿಯಲ್ಲಿ ನೆಲೆಸಿ ಕೋಟ್ಯಾಂತರ ಭಕ್ತರ ಪಾಲಿಗೆ ದೈವ ಸ್ವರೂಪಿಯಾಗಿದ್ದ ಮಾತೆ ಮಾಣಿಕೇಶ್ವರಿ ಅಮ್ಮನವರು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ದುಃಖವಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿಯವರು ಕಂಬನಿ ಮಿಡಿದಿದ್ದಾರೆ.
“ದಯವಿರಬೇಕು ಸಕಲ ಪ್ರಾಣಿಗಳಲ್ಲಿ” ಎಂಬ ಬಸವಣ್ಣನವರ ತತ್ವವನ್ನು ಇಂದಿನ ಪೀಳಿಗೆಯವರಿಗೂ ಭೋದಿಸಿ, ಅದೇ ಮಾರ್ಗದಲ್ಲಿ ತಮ್ಮ ಇಡೀ ಜೀವನವನ್ನು ಸಾಗಿಸಿದ್ದರು. “ನುಡಿದಂತೆ ನಡೆ ಈ ಜನ್ಮ ಒಂದೇ ಕಡೆ” ಎಂಬ ತಮ್ಮ ಅಮೃತ ವಾಣಿಯಿಂದ ಭಕ್ತವೃಂದವನ್ನು ಸನ್ಮಾರ್ಗದೆಡೆಗೆ ನಡೆಸಿದ್ದರು.
ಜನರನ್ನು ಮದ್ಯಪಾನ ಹಾಗೂ ಇನ್ನಿತರ ದುಶ್ಚಟಗಳನ್ನು ಮೆಟ್ಚಿ ನಿಲ್ಲುವಂತೆ ಮಾಡಿ, ಅವರನ್ನು ಭಕ್ತಿಮಾರ್ಗದೆಡೆ ಕೊಂಡೊಯ್ಯಲು ಅವಿರತವಾಗಿ ಶ್ರಮಿಸಿದ್ದರು. ಆ ಭಗವಂತನಲ್ಲಿ ಅಮ್ಮನವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಅವರ ಕೃಪಾಶಿರ್ವಾದ ಸದಾಕಾಲ ಎಲ್ಲರ ಮೇಲಿರಲೇಂದು ಅಂಬಾರಾಯ ಅಷ್ಠಗಿ ಆ ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…