ಸುರಪುರ: ಪರೀಕ್ಷೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಉಳಿದಿರುವ ಸ್ವಲ್ಪ ಸಮಯವನ್ನು ಬಳಸಿಕೊಂಡು ಫಲಿತಾಂಶ ಹೆಚ್ಚಳಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಅಪರ ಆಯುಕ್ತ ನಲಿನ್ ಅತುಲ್ ಕರೆ ನೀಡಿದರು.
ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಹಮ್ಮಿಕೊಂಡಿದ್ದ ೨೦೧೯-೨೦ನೇ ಸಾಲಿನ ತಾಲೂಕಿನ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಯ ನಿಮಿತ್ತ ಪೂರ್ವ ಸಿದ್ದತೆ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆಯ ಅದರಲ್ಲೂ ಸುರಪುರ ತಾಲೂಕಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಫಲಿತಾಂಶವನ್ನು ಹೆಚ್ಚಿಸಲು ತಾಲೂಕಿನ ಎಲ್ಲಾ ಶಿಕ್ಷಕ ಸಮುದಾಯದವರು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಫಲಿತಾಂಶ ಹೆಚ್ಚಿಸಿ.
ಫಲಿತಾಂಶ ಹೆಚ್ಚಳಕ್ಕೆ ತಾಲೂಕಿನ ಪ್ರೌಢಶಾಲಾ ಶಿಕ್ಷಕರು ಸಾಕಷ್ಟು ಪ್ರಯತ್ನಿಸುತ್ತಿದ್ದೀರಿ ಆದರೂ ಯಾವ ಹಂತದಲ್ಲಿ ವಿಫಲತೆ ಆಗುತ್ತಿದೆ ಎಂಬುದನ್ನು ಶಿಕ್ಷಕರು ಕಂಡುಕೊಳ್ಳಿ, ತಾಲೂಕಿನ ಫಲಿತಾಂಶವನ್ನು ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳು ಹಾಗೂ ವಿಧಾನಗಳ ಮೂಲಕ ಉಳಿದಿರುವ ಅಲ್ಪ ದಿನಗಳಲ್ಲಿ ಶಕ್ತಿ ಮೀರಿ ಪ್ರಯತ್ನಿಸಬೇಕು ವಿದ್ಯಾರ್ಥಿಗಳ ಪಾಲಕರನ್ನು ಸಂಪರ್ಕಿಸಿ ಅವರ ಮಕ್ಕಳ ಕಲಿಕೆಯ ಕುರಿತು ತಿಳಿಸಿ ತಾಲೂಕಿನ ಫಲಿತಾಂಶವನ್ನು ನೂರಕ್ಕೆ ನೂರರಷ್ಟು ಪಡೆಯುವ ಬಗ್ಗೆ ನನಗೆ ಮಾತು ಕೊಡಿ ಎಂದು ಶಿಕ್ಷಕರನ್ನು ಕೇಳಿದರು, ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ತಾಲೂಕಿನ ಶಿಕ್ಷಕರು ಫಲಿತಾಂಶ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸಕ್ರೆಪ್ಪಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ತೀವ್ರ ನಿಗಾ ಕಲಿಕಾ ಘಟಕದ ಮಕ್ಕಳ ಫಲಿತಾಂಶ ಕುಸಿದಿದ್ದು ಇದರ ಹೆಚ್ಚಳಕ್ಕೆ ಶಿಕ್ಷಕರು ಶ್ರಮಿಸಬೇಕು ಎಂದು ಹೇಳಿದ ಶಿಕ್ಷಣ ಇಲಾಖೆ ವ್ಯಾಪ್ತಿಯ ಯಾದಗಿರಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ತೀವ್ರ ನಿಗಾ ಘಟಕದ ಮಕ್ಕಳ ಫಲಿತಾಂಶ ಕಮ್ಮಿ ಇದ್ದು ಮುಂಬರುವ ವಾರ್ಷಿಕ ಪರೀಕ್ಷೆಯಲ್ಲಿ ಫಲಿತಾಂಶ ಸುಧಾರಣೆಗೆ ಶ್ರಮಿಸುವಂತೆ ಅವರು ಹೇಳಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಸಹ ನಿರ್ದೇಶಕ ವಿಜಯಕುಮಾರ, ಬಿ.ಇ.ಓ ನಾಗರತ್ನ ಓಲೇಕಾರ ಮಾತನಾಡಿದರು, ಡಿ.ಡಿ.ಪಿ.ಯ ಲಕ್ಷ್ಮೀಕಾಂತರೆಡ್ಡಿ, ವಿಷಯ ಪರೀವೀಕ್ಷಕ ಮಲ್ಲಪ್ಪ ಯರಗೋಳ, ಕ್ಷೇತ್ರ ಸಮನ್ವಯಾಧಿಕಾರಿ ಅಮರೇಶ.ಕೆ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮೌನೇಶ ಕಂಬಾರ ಹಾಗೂ ತಾಲೂಕಿನ ವಿವಿಧ ಪ್ರೌಢಶಾಲೆಗಳ ಮುಖ್ಯ ಗುರುಗಳು ಹಾಗೂ ಶಿಕ್ಷಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…