ಕಲಬುರಗಿ: ನಗರದ ವಿವಿಧ ಪ್ರಮುಖ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ 85 ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ ಕಣ್ಗಾವಲು ಇರಿಸಲಾಗಿದೆ ಎಂದು ಕಲಬುರಗಿ ಪೊಲೀಸ್ ಉಪ ಆಯುಕ್ತರಾದ ಕಿಶೋರ್ ಬಾಬಾ ಅವರು ತಿಳಿಸಿದ್ದಾರೆ.
ಆದರ್ಶ ನಗರ ಚೌಕ್, ಬಸವೇಶ್ವರ ಕಾಲೋನಿ ಚೌಕ್, ಬಾರೆ ಹೀಲ್ಸ್ ಚೌಕ್, ಸಂಗತ್ರಾಶ ವಾಡಿ, ಮುಸ್ಲಿಂ ಚೌಕ್, ಹಫ್ತ್ ಗುಂಬಜ್ ಕ್ರಾಸ್, ರಾಮಜೀ ನಗರ, ಹಾಗೂ ಬಿಬಿ ರಜಾ ಕಾಲೇಜ ಚೌಕ್ ಸೇರಿದಂತೆ ಮುಂತಾದ ಬಿದಿಗಳಲ್ಲಿ ಕ್ಯಾಮೆರಾಗಳು ಅಳವಡಿಸಿದ್ದಾರೆ.
ಅಪರಾಧ ಪ್ರಕರಣ ಹಾಗೂ ಕೋಮು ಸೌಹಾರ್ದತೆ ಕದಡುವಂತಹ ಕೃತ್ಯಗಳಿಗೆ ಕಡಿವಾಣ ಹಾಕುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದ್ದು, ಸಾರ್ವಜನಿಕರ ಹಿತದೃಷ್ಠಿಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಈ ಪ್ರಯತ್ನದಿಂದ ಕಲಬುರಗಿ ಜನರಿಂದ ಸಂತೋಷ ವ್ಯಾಕ್ತವಾಗಿದೆ. ಸಿಸಿ ಟವಿ ಅಳವಡಿಕೆಗೆ ಅಭೂತಪೂರ್ವ ಜನ ಬೆಂಬಲ ಸಿಗುತ್ತಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…