ಕಲಬುರಗಿ: ಲೋಕೋಪಯೋಗಿ ಇಲಾಖೆಯ ನಿವೃತ್ತ ಅಧಿಕಾರಿ ಕುಳೇಕುಮಟಗಿಯ ಲಿಂ. ಬಿ.ಬಿ. ಪಾಟೀಲ ಅವರ ಪ್ರಥಮ ಪುಣ್ಯ ಸ್ಮರಣೆ ಕಾರ್ಯಕ್ರಮ ಶರಣ ಸಾಹಿತಿ ಶಿವರಂಜನ್ ಸತ್ಯಂಪೇಟೆ ಬರೆದ ‘ವಚನ ಹೃದಯ’ ಕೃತಿ ಲೋಕಾರ್ಪಣೆ ಹಾಗೂ ಕಾಯಕಜೀವಿಗಳಿಗೆ ಸನ್ಮಾನ ಕಾರ್ಯಕ್ರಮ ಮಾರ್ಚ್ ೧೧ ರಂದು ಬೆಳಗ್ಗೆ 11.30ಕ್ಕೆ ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶೋಭಾ ಡಾ. ಬಾಬುರಾವ ಶೇರಿಕಾರ, ಡಾ. ಗೀತಾ ಡಾ. ಬಸವಂತರಾವ ಪಾಟೀಲ ತಿಳಿಸಿದ್ದಾರೆ.
ಮಾಜಿ ಸಚಿವ ಎಸ್.ಕೆ. ಕಾಂತಾ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಶಿವರಂಜನ್ ಸತ್ಯಂಪೇಟೆ ಅವರು ಬರೆದ ‘ವಚನ ಹೃದಯ’ ಕೃತಿ ಲೋಕಾರ್ಪಣೆ ಮಾಡುವರು.
ಬಿಜೆಪಿ ಯುವ ಮುಖಂಡ ಚಂದು ಪಾಟೀಲ,ಮಹಾನಗರ ಪಾಲಿಕೆ ಸದಸ್ಯ ಶಿವಾನಂದ ಪಾಟೀಲ ಅಷ್ಟಗಿ, ವೀರಶೈವ ಮಹಾಸಭಾ ಜಿಲ್ಲಾ ಉಪಾಧ್ಯಕ್ಷ ಕಲ್ಯಾಣಪ್ಪ ಪಾಟೀಲ ಮಳಖೇಡ, ಸಮಾಜ ಸೇವಕ ಹಣಮಂತ ಪೂಜಾರಿ, ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಬಿ.ಬಿ. ಪಾಟೀಲರ ಪತ್ನಿ ಇಂದಿರಾ ಬಿ. ಪಾಟೀಲ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ. ಮಾಜಿ ಶಾಸಕಿ ಅರುಣಾದೇವಿ ಸಿ. ಪಾಟೀಲ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇವೇಳೆಯಲ್ಲಿ ಅಂಬಾರಾಯ ಮಡಿವಾಳ, ಶ್ರೀಶೈಲ ಪಾಟೀಲ, ಚಂದ್ರಕಾಂತ ಹೆಡೆ, ರಾಧಾ ಸುರೇಶ, ಉಮೇಶ ಗೋಡಬೋಲೆ, ಲಕ್ಷ್ಮೀ ಸಂಗೋಳ್ಳಿ, ಶಿವಾನಂದ ಬಿರಾದಾರ, ಬಾಬುರಾವ ಜನವಾಡೆ, ಖ್ವಾಜಾ ಮೈನುದ್ದೀನ್, ಜಗದೀಶ ಗಾಜರೆ ಇತರರನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…