ಕೊರೋನಾ ವೈರಸ್: ಕಲಬುರಗಿ ವಿಮಾನ ನಿಲ್ದಾಣದಲ್ಲಿ ತಪಾಸಣೆ ಆರಂಭ

0
308

ಕಲಬುರಗಿ: ದೇಶಾದ್ಯಂತ ಕರೋನಾ ವೈರಸ್‌ನಿಂದ ಜನ ಆತಂಕದಲ್ಲಿ ಮುಳುಗಿದ್ದು, ಜಿಲ್ಲೆಯಲ್ಲಿ ವೈರಸ್ ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಜಿಲ್ಲಾದ್ಯಾಂತ ಕಟ್ಟೆಚ್ಚರ ವಹಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿಶೇಷ ತಂಡಯೊಂದನ್ನು ರಚಿಸಿ ತಪಾಸಣೆ ಮಾಡಲಾಗುತ್ತಿದೆ.

Contact Your\'s Advertisement; 9902492681

ವಿಮಾನ ನಿಲ್ದಾಣದಲ್ಲಿ ಕಲಬುರಗಿ ಬರುವ ಮತ್ತು ತೆರಳುವ ಪ್ರಯಾಣಿಕರಿಗೆ ಈ ತಂಡ ತಪಾಸಣೆಗೆ ಒಳಪಡಿಸಿ ನಂತರ ವಿಮಾನ ನಿಲ್ದಾಣದಿಂದ ಹೊರಗಡೆ ಹಾಗೂ ಪ್ರಯಾಣಕ್ಕೆ ಕಳುಹಿಸಲಾಗುತ್ತಿದೆ.

ಕಲಬುರಗಿಯಲ್ಲಿ ಜಿಮ್ಸ್, ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತ ಸಹಯೋಗದೊಂದಿಗೆ ಈ ವಿಶೇಷ ತಂಡ ರಚನೆಯಾಗಿದೆ ಎಂದು ತಿಳಿದು ಬಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here