ಕಲಬುರಗಿ: ಪ್ರಸಕ್ತ 2019-20ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪ್ರವೇಶ ಪಡೆದು ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಮಂಜೂರಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿಇಟಿ/ನೀಟ್ ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ. 2 ಬಡ್ಡಿದರದಲ್ಲಿ ವಾರ್ಷಿಕವಾಗಿ ಗರಿಷ್ಠ ೧ ಲಕ್ಷ ರೂ.ಗಳ ಸಾಲ ಮಂಜೂರು ಮಾಡಲಾಗುವುದು. ಸಾಲ ಪಡೆಯಲಿಚ್ಛಿಸುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು ೩ಬಿಗೆ ಸೇರಿದವರಾಗಿರಬೇಕು (ವಿಶ್ವಕರ್ಮ ಮತ್ತು ಉಪಜಾತಿಗಳು, ಅಲ್ಪಸಂಖ್ಯಾತರು ಮತ್ತು ಉಪಜಾತಿಗಳು, ಉಪ್ಪಾರ ಮತ್ತು ಉಪಜಾತಿಗಳು ಹಾಗೂ ಬೇಸ್ತ/ಅಂಬಿಗ ಮತ್ತು ಅದರ ಉಪಜಾತಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿ ಹಾಗೂ ಕುಟುಂಬದ ವಾರ್ಷಿಕ ವರಮಾನ ಮಿತಿ 3.50 ಲಕ್ಷ ರೂ. ದೊಳಗಿರಬೇಕು.
ಸಾಲ ಪಡೆಯಲಿಚ್ಛಿಸುವ ವಿದ್ಯಾರ್ಥಿಗಳು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ www.karnataka.gov.in/dbcdc ವೆಬ್‌ಸೈಟ್‌ನಲ್ಲಿ ಲಾಗಿನ್ ಆಗಿ User name-arivu ಮತ್ತು ಪಾಸ್‌ವರ್ಡ್ arivu@123 ನ್ನು ನಮೂದಿಸಿ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಭರ್ತಿ ಮಾಡಬೇಕು. ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಆಧಾರ ಕಾರ್ಡ/ಚುನಾವಣಾ ಗುರುತಿನ ಚೀಟಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಹಾಗೂ ಸಿಇಟಿ/ನೀಟ್ ಪ್ರವೇಶ ಪರೀಕ್ಷೆ ಅಡ್ಮಿಶನ್ ಟಿಕೇಟ್ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಆನ್‌ಲೈನ್ ಮೂಲಕ ಸಲ್ಲಿಸಬೇಕು. ವಿದ್ಯಾರ್ಥಿಗಳು ಒಂದಕ್ಕಿಂತ ಹೆಚ್ಚಿನ ಜಿಲ್ಲೆಯಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಿ ಸಲ್ಲಿಸಿದ್ದಲ್ಲಿ ತಿರಸ್ಕರಿಸಲಾಗುತ್ತದೆ. ಷರತ್ತು ಹಾಗೂ ನಿಬಂಧನೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹೆಲ್ಫ್‌ಲೈನ್ 08472-278635, 9449985479 ಗೆ ಸಂಪರ್ಕಿಸಲು ಕೋರಲಾಗಿದೆ.