ಕಲಬುರಗಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೋನಾ ಶಂಕಿತ ಮಹ್ಮದ ಹುಸೇನ ಸಿದ್ದಿಕಿ(76) COVID-19(ಕೊರೋನಾ ವೈರಸ್) ದಿಂದ ಮೃತಪಟ್ಟಿದ್ದಾರೆ.
ಮೃತರ ಅಂತ್ಯಕ್ರಿಯೆ ಆಗುವವರೆಗೂ ತಾಲೂಕಾಧಿಕಾರಿ ಡಾ.ಶರಣಬಸಪ್ಪ ಕ್ಶಾತನಾಳ ಹಾಗೂ ಅವರ ತಂಡ ಉಸ್ತುವಾರಿ ವಹಿಸಿಕೊಂಡು ಅದರ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ಮೌಖಿಕ ಆದೇಶ ನೀಡಿದ್ದಾರೆ.
ರಾಜ್ಯದಲ್ಲಿ ಇದೇ ಮೊದಲ ಬಲಿ ಎಂದು ಹೇಳಲಾಗುತ್ತಿದೆ. ಜಿಲ್ಲಾ ಆರೋಗ್ಯ ಇಲಾಖೆಯಿಂದ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ.