ಬಿಸಿ ಬಿಸಿ ಸುದ್ದಿ

ವಸತಿ ನಿಲಯದಲ್ಲಿ ಎಸ್‌ಎಸ್‌ಎಸ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕಾರ್ಯಾಗಾರ

ಶಹಾಬಾದ: ಎಸ್‌ಎಸ್‌ಎಸ್‌ಸಿ ವಿದ್ಯಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ಧೈರ್ಯದಿಂದ ಪರೀಕ್ಷೆ ಬರೆಯುವ ಮೂಲಕ ಉತ್ತಮ ಅಂಕಗಳಿಸಬೇಕು ಎಂದು ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿ ಗಿರೀಶ ರಂಜೋಳಕರ್ ಹೇಳಿದರು.

ಅವರು ನಗರದ ಬಾಲಕರ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಎಸ್‌ಎಸ್‌ಎಸ್‌ಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿಶೇಷ ಪರೀಕ್ಷಾ ಕಾರ್ಯಾಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪಾಠವನ್ನು ಮನನ ಮಾಡಿಕೊಂಡು ಅಭ್ಯಾಸ ಮಾಡಬೇಕು.ರಾತ್ರಿಯಿಡಿ ನಿದ್ರೆಗೆಟ್ಟು ಓದಬಾರದು. ಈ ಸಮಯದಲ್ಲಿ ಹೊರಗಡೆ ಕರಿದ ಯಾವುದೇ ತಿಂಡಿಗಳನ್ನು ತಿನ್ನಬಾರದು. ಇದರಿಂದ ದೇಹದ ಆರೋಗ್ಯ ಹದಗೆಡುತ್ತದೆ. ಬೆಳಗಿನ ಜಾವ ಎದ್ದು ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು.ಹತ್ತು ಬಾರಿ ಓದುವ ಬದಲು ಎರಡು ಬಾರಿ ಬರೆದು ಅಭ್ಯಾಸ ಮಾಡಿದರೆ ವಿಷಯ ನೂರಕ್ಕೆ ನೂರರಷ್ಟು ಜ್ಞಾಪಕದಲ್ಲಿ ಉಳಿಯುತ್ತದೆ. ಸತತ ಪರಿಶ್ರಮ,ನಿಯಮಿತ ಓದು, ಏಕ್ರಾಗತೆ ಇವು ಉತ್ತಮ ಫಲಿತಾಂಶ ಪಡೆದುಕೊಳ್ಳಲು ಪೂರಕವಾದ ಅಂಶಗಳಾಗಿವೆ. ವಿದ್ಯಾರ್ಥಿಗಳು ಯಾವುದೇ ವಾಮ ಮಾರ್ಗ ಅನುಸರಿಸದೇ ಮುಕ್ತವಾಗಿ ಪರೀಕ್ಷೆ ಎದುರಿಸಿ ಹೆಚ್ಚು ಅಂಕಗಳಿಸುವ ಮೂಲಕ ನಿಮ್ಮ ಪಾಲಕರಿಗೆ, ಕಲಿಸಿದ ಶಿಕ್ಷಕರಿಗೆ ಕೀರ್ತಿ ತರುವಂಥ ಕೆಲಸ ಮಾಡಿ ಎಂದು ಹೇಳಿದರು.

ಉಪನ್ಯಾಸಕ ಗುರಲಿಂಗ ತುಂಗಳ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎಂದಾಕ್ಷಣ ಮಕ್ಕಳಲ್ಲಿ ಒಂದು ರೀತಿಯ ತಳಮಳ ಇರುತ್ತದೆ. ಚೆನ್ನಾಗಿ ಅಭ್ಯಾಸ ಮಾಡಿದ ಮಕ್ಕಳೂ ಕೂಡಾ ಇದಕ್ಕೆ ಹೊರತಾಗಿ ಇರುವುದಿಲ್ಲ. ನಿಮ್ಮನ್ನು ನೀವು ಆತ್ಮವಿಶ್ವಾಸದಿಂದ ಪರೀಕ್ಷೆಗೆ ಸಜ್ಜುಗೊಳಿಸಿ, ಒಳ್ಳೆಯ ಅಂಕ ಪಡೆಯಬೇಕು. ಭವಿಷ್ಯದ ಉತ್ತಮ ಸಮಾಜಕ್ಕಾಗಿ ಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿ ಶಾಲೆಯಲ್ಲಿ ಶಿಕ್ಷಕರದ್ದಾದರೆ, ಮನೆಯಲ್ಲಿ ಪಾಲಕರದ್ದು. ಶಿಸ್ತು ಜೀವನದ ಅಡಿಪಾಯವಾಗಿದ್ದು, ಶಿಕ್ಷಕರನ್ನು ವಿನಯದಿಂದ ಗೌರವದಿಂದ ಕಾಣಿ ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ಆನಂದ ಕುಲಕರ್ಣಿ,ಬಸಪ್ಪ, ಉಪತಹಸೀಲ್ದಾರ ಹೇಮಾ ಚಿಕ್ಕಮಠ, ವಸತಿ ನಿಲಯದ ಮೇಲ್ವಿಚಾರಕ ರವಿಕುಮಾರ ಇತರರು ವೇದಿಕೆಯ ಮೇಲಿದ್ದರು.

ಅನಿತಾ ರಾಠೋಡ, ಭೀಮಾಶಂಕರ ದಂಡೆ, ಗುಂಡುರಾಯ, ಸಿದ್ರಾಮಪ್ಪ, ರಾಮಚಂದ್ರಪ್ಪ ಸನಗುಂದಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು. ಯಶೋಧಾ ಮಸ್ಕಿ ಪ್ರಾರ್ಥಿಸಿದರು, ಶಿವಕುಮಾರ ಬಿರಾದಾರ ಸ್ವಾಗತಿಸಿದರು. ರವಿಕುಮಾರ ನಿರೂಪಿಸಿ, ವಂದಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago